ಆ.೧೦ರಂದು ರಾಜ್ಯಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

kesarugadde
Published on

ಮಡಿಕೇರಿ: ಮಡಿಕೇರಿ ತಾಲೂಕು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ ದೇವಯ್ಯನವರ ಗದ್ದೆಯಲ್ಲಿ ೨೦೨೪-೨೫ ನೇ ಸಾಲಿನ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆ ಆ.೧೦ ರಂದು ಏರ್ಪಡಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಪ್ ಇಂಡಿಯಾ(ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ಕಗ್ಗೋಡ್ಲು ಕಾವೇರಿ ಯುವಕ ಸಂಘ(ರಿ) ಇವರ ಸಂಯಕ್ತಾಶ್ರಯದಲ್ಲಿ ನಡೆಯಲಿದೆ. ಎಲ್ಲಾ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಸಹಕರಿಸುವಂತೆ ಕೋರಿದ್ದಾರೆ.


ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್-೯೪೮೧೨೧೩೯೨೦, ಬಾಳಾಡಿ ದಿಲೀಪ್ ಕುಮಾರ್-೮೬೧೮೫೬೮೧೭೩, ಕುಂಜಿಲನ ಎಂ.ಮೋಹನ್-೯೪೮೦೬೪೬೩೮೨, ನವೀನ್ ದೇರಳ-೯೪೪೯೯೫೨೦೦೮ನ್ನು ಸಂಪರ್ಕಿಸಬಹುದು ಎಂದು ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net