25.1 C
Bangalore
Friday, December 6, 2019

VIDEO| ತಾಯಿಯೊಂದಿಗೆ ಮಲಗಿದ್ದ ಮಗು ಕಿಡ್ನಾಪ್​ಗೆ ಯತ್ನ: ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಆತಂಕಕಾರಿ ದೃಶ್ಯ!

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಲೂಧಿಯಾನ(ಪಂಜಾಬ್​): ಕಳೆದ ರಾತ್ರಿ ತಮ್ಮ ಮನೆಯ ಹೊರಗಡೆ ತಾಯಿಯೊಂದಿಗೆ ಮಲಗಿದ್ದ ನಾಲ್ಕು ವರ್ಷದ ಮಗುವನ್ನು ವ್ಯಕ್ತಿಯೊಬ್ಬ ಅಪಹರಣ ಮಾಡಲು ಯತ್ನಿಸಿದ ಆತಂಕಕಾರಿ ಘಟನೆ ಲೂಧಿಯಾನದ ರಿಷಿ ನಗರದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಅಪಹರಣ ಯತ್ನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋದಲ್ಲಿರುವಂತೆ ಮನೆಯ ಮುಂಭಾಗದ ರಸ್ತೆಯಲ್ಲಿ ತಾಯಿ ಹಾಗೂ ಅಜ್ಜಿಯೊಂದಿಗೆ ನಾಲ್ಕು ವರ್ಷದ ಮಗು ಮಲಗಿರುತ್ತದೆ. ಸೈಕಲ್​ ಬಂಡಿಯನ್ನು ತಳ್ಳಿಕೊಂಡು ಬರುವ ಅಪಹರಣಕಾರ ಮಲಗಿರುವವರ ಬಳಿ ಮೆಲ್ಲಗೆ ಬಂದು ಮಲಗಿದ್ದ ಮಗುವನ್ನು ಎತ್ತಿಕೊಂಡು ಬಂಡಿಯೊಳಗೆ ಹಾಕಿಕೊಳ್ಳುತ್ತಾನೆ. ತಕ್ಷಣ ಎಚ್ಚರಗೊಂಡ ಮಗುವಿನ ತಾಯಿ ಬಂಡಿಯಿಂದ ಮಗುವನ್ನು ಎತ್ತಿಕೊಳ್ಳುತ್ತಾಳೆ. ಬಳಿಕ ಅಪಹರಣಕಾರ ಸೈಕಲ್​ ಎತ್ತಿಕೊಂಡು ಅಲ್ಲಿಂದ ಪರಾರಿಯಾಗುತ್ತಾನೆ. ಈ ವೇಳೆ ಎಚ್ಚರಗೊಂಡ ಅಜ್ಜಿಯು ಕೂಡ ಅಪಹರಣಕಾರನನ್ನು ಹಿಮ್ಮೆಟ್ಟಿದರೂ ಹಿಡಿಯಲು ಸಾಧ್ಯವಾಗುವುದಿಲ್ಲ.

ಘಟನೆಯ ವೇಳೆ ಕಿರುಚಾಟದ ಸದ್ದು ಕೇಳಿ ನೆರೆಹೊರೆಯವರು ಹೊರಬಂದು ನೋಡಿದಾಗ ಘಟನೆ ಮನವರಿಕೆಯಾಗಿ ಮಗುವಿನ ಮನೆಯಿಂದ ಸ್ವಲ್ಪ ದೂರದಲ್ಲಿ ಹೋಗುತ್ತಿದ್ದ ಅಪಹರಣಕಾರನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸುತ್ತಾರೆ.

ಆರೋಪಿಯನ್ನು 40 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮಗುವನ್ನು ಯಾಕೆ ಅಪಹರಣ ಮಾಡಲು ಯತ್ನಿಸಿದ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. (ಏಜೆನ್ಸೀಸ್​)

https://twitter.com/ANI/status/1174189656856039429?s=20

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...