22.5 C
Bengaluru
Sunday, January 19, 2020

PHOTOS: ಚೀನಾದ 55 ಕಿ.ಮೀ. ಉದ್ದದ, ವಿಶ್ವದ ಅತಿ ಉದ್ದನೆಯ ಸಮುದ್ರ ಸೇತುವೆ ಉದ್ಘಾಟನೆ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಝುಹೈ: ವಿಶ್ವದ ಅತಿ ಉದ್ದನೆಯ ಸಮುದ್ರ ಸೇತುವೆಯನ್ನು ಚೀನಾದ ಅಧ್ಯಕ್ಷ ಕ್ಸಿ ಜಿನ್​ಪಿಂಗ್​ ಅವರು ಮಂಗಳವಾರ ಉದ್ಘಾಟಿಸಿದರು. ಸೇತುವೆಯೂ ಚೀನಾದ ಮುಖ್ಯಭಾಗದಿಂದ ಹಾಂಕ್​ ಕಾಂಗ್​ ಹಾಗೂ ಮಕಾವು ರಾಷ್ಟ್ರಗಳಿಗೆ ಸಂಪರ್ಕ ಕಲ್ಪಿಸಲಿದೆ.

ಚೀನಾದ ದಕ್ಷಿಣ ಭಾಗದ ಪ್ರಮುಖ ನಗರ ಝುಹೈನಲ್ಲಿನ ಹೊಸ ಬಂದರು ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಸೇತುವೆಯನ್ನು ಅಧಿಕೃತವಾಗಿ ತೆರೆದಿರುವುದಾಗಿ ಅಧ್ಯಕ್ಷ ಜಿನ್​ಪಿಂಗ್​ ಘೋಷಿಸಿದರು. ಈ ವೇಳೆ ಹಾಂಗ್ ಕಾಂಗ್ ಮತ್ತು ಮಕಾವು ನಗರದ ನಾಯಕರು ಉಪಸ್ಥಿತರಿದ್ದರು. ಬುಧವಾರದಿಂದ ಸೇತುವೆ ಮೇಲಿನ ಸಂಚಾರ ಪ್ರಾರಂಭವಾಗಲಿದೆ.

ಅಚ್ಚರಿಯನ್ನುಂಟು ಮಾಡುವ ಸೇತುವೆಯೂ 55 ಕಿ.ಮೀ.(34 ಮೈಲಿ) ಉದ್ದವಿದ್ದು, ಒಂದು ಸ್ನೇಕಿಂಗ್​ ರಸ್ತೆ ಸೇತುವೆ ಹಾಗೂ ನೀರೊಳಗಿನ ಸುರಂಗ ಮಾರ್ಗವನ್ನು ಹೊಂದಿದೆ. ಹಾಂಗ್​ಕಾಂಗ್​ನ ಲಾಂಟಾವು ದ್ವೀಪ, ಚೀನಾದ ಝುಹೈ ಹಾಗೂ ಜೂಜಾಟ ಖ್ಯಾತಿಯ ಮಕಾವು ಪ್ರದೇಶವನ್ನು ಸಂಪರ್ಕಿಸಲಿದೆ. ಚೀನಾದ ಪರ್ಲ್​ ನದಿ ತೀರದಾದ್ಯಂತ ಈ ಸೇತುವೆ ವ್ಯಾಪಿಸಿದೆ.

ಕಳೆದ ತಿಂಗಳು ಉದ್ಘಾಟನೆಯಾದ ಅತಿ ವೇಗದ ರೈಲು ಮಾರ್ಗದ ನಂತರ ಚೀನಾ ಮತ್ತು ಹಾಂಕ್​ಕಾಂಗ್​ ನಡುವಿನ ಎರಡನೇ ದೊಡ್ಡ ಯೋಜನೆ ಇದಾಗಿದ್ದು, ಗ್ರೇಟರ್ ಬೇ ಏರಿಯಾವನ್ನು ಆರ್ಥಿಕ ಕೇಂದ್ರವನ್ನಾಗಿ ಮಾಡುವ ಬೀಜಿಂಗ್ ತಂತ್ರದ ಭಾಗವಾಗಿದೆ.​

ಸೇತುವೆ ನಿರ್ಮಾಣ ಕಾರ್ಯ 2009ರಲ್ಲಿ ಪ್ರಾರಂಭವಾಯಿತು. ಬಜೆಟ್​ ವಿವಾದ, ಭಷ್ಟಾಚಾರ ಆರೋಪ ಹಾಗೂ ನಿರ್ಮಾಣ ವೇಳೆ ಕೆಲಸಗಾರರ ಸಾವಿನಿಂದಾಗಿ ಸೇತುವೆ ಕೆಲಸ ವಿಳಂಬವಾಯಿತು. ಚೀನಾದ ಝುಹೈ ಅಧಿಕಾರಿಗಳು ಕಳೆದ ವಾರವೇ ಸೇತುವೆ ಉದ್ಘಾಟನೆ ದಿನವನ್ನು ಘೋಷಿಸಿದ್ದರು. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...