ಫೆ.15ರಂದು ಪೌರಕಾರ್ಮಿಕರಿಂದ ಸಿಎಂ ಮನೆ ಚಲೋ

Published on

ಮೈಸೂರು: ರಾಜ್ಯ ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರುವಂತೆ ಒತ್ತಾಯಿಸಿ ಫೆ.15ರಂದು ಮುಖ್ಯಮಂತ್ರಿ ಮನೆ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ತಿಳಿಸಿದರು.
ನೇರ ಪಾವತಿ ಮಾಡುವುದನ್ನು ಈ ಬಜೆಟ್‌ನಲ್ಲಿ ಘೋಷಿಸಬೇಕು. ಅದಕ್ಕಾಗಿ ಫೆ.13ರಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ಬಳಿಕ ಫೆ.15ರಂದು ಮುಖ್ಯಮಂತ್ರಿ ಮನೆ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗುತ್ತಿಗೆ ಯೋಜನೆ ಕಾರ್ಮಿಕರನ್ನು ಸಮನಾಗಿ ಕಾಣಬೇಕು. ಪೌರಾಡಳಿತ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಅಗತ್ಯಕ್ಕನುಗುಣವಾಗಿ ಪೌರ ಚಾಲಕ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಖಜಾಂಚಿ ಮಣಿ, ರಾಜ್ಯ ಸಲಹೆಗಾರ ಚಂದ್ರು, ಮಂಡ್ಯ ಜಿಲ್ಲಾಧ್ಯಕ್ಷ ದಿನೇಶ್, ಮೈಸೂರು ವಿಭಾಗೀಯ ಸಂಚಾಲಕ ರಂಗಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net