More

    ಜನವರಿ 26ರಂದು ರೈತರಿಂದಲೇ ಧ್ವಜಾರೋಹಣ

    ಬ್ಯಾಡಗಿ: ರೈತರ ಸಮಸ್ಯೆಗಳನ್ನು ಇತ್ಯರ್ಥಪಡಿಸದಿದ್ದಲ್ಲಿ ಜ. 26ರಂದು ಗಣರಾಜ್ಯೋತ್ಸವ ದಿನ ಜಿಲ್ಲೆಯ ಸಚಿವರು ಸೇರಿದಂತೆ ತಾಲೂಕು ಮಟ್ಟದಲ್ಲಿ ಶಾಸಕರಿಗೆ ಅವಕಾಶ ನೀಡದೆ ರೈತರೇ ಧ್ವಜಾರೋಹಣ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಸಿದರು.

    ಭಾನುವಾರ ಪ್ರತಿಭಟನಾರ್ಥ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಜ. 23ರಂದು ಜಿಲ್ಲೆಯ ಸಾವಿರಾರು ರೈತರು ಹಾವೇರಿಯ ಜಿಲ್ಲಾಧಿಕಾರಿ ಕಾರ್ಯಾಲಯ ಎದುರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಆರಂಭಿಸಲಿದ್ದೇವೆ. ಮೂರು ತಿಂಗಳ ಹಿಂದೆ ಮುಖ್ಯಮಂತ್ರಿಗಳು ಬರಗಾಲ ಪಟ್ಟಿಯನ್ನು ಘೊಷಿಸಿದ್ದಾರೆ. ಆದರೆ, ಈವರೆಗೂ ರಾಜ್ಯ ಸರ್ಕಾರ ತನ್ನ ಪಾಲಿನ ಪರಿಹಾರ ಹಣ ಜಮೆ ಮಾಡಿಲ್ಲ. ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಕೈಬಿಟ್ಟು ರಾಜ್ಯ ಸರ್ಕಾರ ತಮ್ಮ ಪಾಲಿನ ಹಣ ನೀಡಲಿ. ಹೆಕ್ಟೇರಿಗೆ 2 ಸಾ.ರೂ. ಯಾತಕ್ಕೂ ಸಾಲುವುದಿಲ್ಲ. ರೈತರು ಸರ್ಕಾರದ ವಿರುದ್ಧ ಆಕ್ರೋಶಗೊಂಡು ಹೋರಾಟಕ್ಕಿಳಿದಿದ್ದಾರೆ. ಕೂಡಲೇ ರೈತರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

    ಜಿಲ್ಲೆಯ ಸಚಿವರು ಹಾಗೂ ತಾಲೂಕುಗಳಲ್ಲಿ ಶಾಸಕರು ಜ. 26ರಂದು ಧ್ವಜಾರೋಹಣ ನೆರವೇರಿಸಬೇಕಿದೆ. ಆದರೆ, ರೈತರ ಬೇಡಿಕೆ ಈಡೇರಿಸದ ಸರ್ಕಾರ, ಸಚಿವರು, ಶಾಸಕರ ನಿರ್ಲಕ್ಷ್ಯವನ್ನು ಖಂಡಿಸುತ್ತಿದ್ದೇವೆ. ಆ ದಿನ ರೈತರು ಧ್ಜಜಾರೋಹಣ ನೇರವೇರಿಸಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕೂ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲವೆಂದು ಸ್ಪಷ್ಟಪಡಿಸಿದರು.

    ರೈತ ಪದಾಧಿಕಾರಿಗಳಾದ ಗಂಗಣ್ಣ ಎಲಿ, ಮೌನೇಶ ಕಮ್ಮಾರ, ಪ್ರವೀಣ ಬಡ್ಡಿ, ಜಾನ್ ಪುನೀತ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts