More

    ಮಾ.೨೨ ರಂದು ಡಾ. ನಾ.ಡಿಸೋಜ ದತ್ತಿ ಕಾರ್ಯಕ್ರಮ

    ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿಯ ಕರ್ನಾಟಕ ಇನ್ಸ್‌ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ನ ಸಂಯುಕ್ತಾಶ್ರಯದಲ್ಲಿ ಮಾ.೨೨ ರಂದು ಡಾ.ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಉಪನ್ಯಾಸ ಮತ್ತು ಕಥಾ ಸ್ಪರ್ಧೆ ಹಾಗೂ ನಾಟಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.


    ಅಂದು ಬೆಳಿಗ್ಗೆ ೧೧.೩೦ ಗಂಟೆಗೆ ನಗರದ ಕರ್ನಾಟಕ ಇನ್ಸ್‌ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಇನ್ಸ್‌ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್‌ನ ಪ್ರಾಚಾರ್ಯರಾದ ಆರ್.ಎಸ್.ರೇಣುಕಾ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್‌ರವರು ಅಧ್ಯಕ್ಷತೆ ವಹಿಸಲಿದ್ದಾರೆ.


    ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ಪಾಲ್ಗೊಳ್ಳಲಿದ್ದು, ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಮಡಿಕೇರಿ ತಾಲೂಕು ಅಧ್ಯಕ್ಷ ಕಡ್ಲೆರ ತುಳಸಿ ಮೋಹನ್ ಉಪಸ್ಥಿತರಿರುವರು.
    ೮೦ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು, ಸಾಹಿತಿಗಳಾದ ಡಾ.ನಾ.ಡಿಸೋಜ ಅವರ ಸಾಹಿತ್ಯದ ಕುರಿತು ಸೋಮವಾರಪೇಟೆಯ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ, ಸಾಹಿತಿ ಹಾಗೂ ಕಲಾವಿದೆ ಕೆ.ಮಿಲನ ಭರತ್ ಉಪನ್ಯಾಸ ನೀಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts