ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ನ.೧೦ ರಂದು ಬೆಳಗ್ಗೆ ೮.೩೦ ಗಂಟೆಗೆ ಮಡಿಕೇರಿ ತಾಲೂಕು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ನ.೧೦ ರಂದು ಬೆಳಗ್ಗೆ ೮.೩೦ ಗಂಟೆಗೆ ಕಡಂಗ ಗಣಪತಿ ದೇವಸ್ಥಾನದ ಎದುರಿನಿಂದ ಮ್ಯಾರಥಾನ್, ನಂತರ ಬೆಳಗ್ಗೆ ೯.೩೦ ಗಂಟೆಗೆ ಧ್ವಜಾರೋಹಣ ಮತ್ತು ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ನರಿಯಂದಡ ಗ್ರಾ.ಪಂ. ಅಧ್ಯಕ್ಷರಾದ ಪೆಮ್ಮಂಡ ಕೌಶಿ ಕಾವೇರಮ್ಮ, ನೌಕಾದಳದ ನಿವೃತ್ತ ಸೇನಾನಿ ಪುದಿಯಮನೆ ಕೃಷ್ಣ, ಯವಕಪಾಡಿ ನಿವೃತ್ತ ಶಿಕ್ಷಕರಾದ ಮಂಞಂಡ್ರ ರೇಖಾ ಉಲ್ಲಾಸ್ ಇತರರು ಪಾಲ್ಗೊಳ್ಳಲಿದ್ದಾರೆ.
ನಂತರ ಬೆಳಗ್ಗೆ ೧೦ ಗಂಟೆಗೆ ವಿವಿಧ ಕ್ರೀಡಾಕೂಟ ಮತ್ತು ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ ೧.೩೦ ಗಂಟೆಗೆ ಚೆಯ್ಯಂಡಾಣೆ ಮುಖ್ಯರಸ್ತೆಯಿಂದ ಶಾಲೆವರೆಗೆ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ ೨ ಗಂಟೆಗೆ ಗಂಡಸರ ಹಗ್ಗಜಗ್ಗಾಟದ ಅಂತಿಮ ಪಂದ್ಯಾಟ ನಡೆಯಲಿದೆ. ನಂತರ ಹಿರಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಶಾಸಕ ಡಾ.ಮಂತರ್ ಗೌಡ, ಕರ್ನಾಟಕ ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಪಾರಣೆ ಗೌಡ ಸಮಾಜದ ಅಧ್ಯಕ್ಷರಾದ ಮುಕ್ಕಟಿ ಕುಶಾಲಪ್ಪ, ಚೆಯ್ಯಂಡಾಣೆ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಹರಿಪ್ರಸಾದ್ ಬೆಳಿಯಂಡ್ರ, ಮೈಸೂರು ಗೌಡ ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲು ಮನೋಹರ್, ಚೆಯ್ಯಂಡಾಣೆ ಸ.ಹಿ.ಮಾ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಪ್ರೇಮಕುಮಾರಿ, ಕೆದಮುಳ್ಳೂರು ಗ್ರಾ.ಪಂ. ಮಾಜಿ ಸದಸ್ಯರಾದ ಗೌಡುಧಾರೆ ಚೋಟು ಬಿದ್ದಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.