15ರಂದು ಸಿಎಂ ಸಮ್ಮುಖದಲ್ಲಿ ಮಹಾನಗರ ಪಾಲಿಕೆ ನೌಕರರ ಜೊತೆ ನಗರಾಭಿವೃದ್ಧಿ ಸಚಿವ ಜೊತೆ

byrati suresh
Published on

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವ ಕುರಿತು ಮಂಗಳವಾರ (ಜು.15) ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸಭೆ ಕರೆದಿರುವ ಹಿನ್ನೆಲೆಯಲ್ಲಿ 10 ಮಹಾನಗರ ಪಾಲಿಕೆ ನೌಕರರು, 4 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಶನಿವಾರ ತಾತ್ಕಾಲಿಕವಾಗಿ ಕೈಬಿಟ್ಟಿದ್ದಾರೆ.

ಮುಷ್ಕರನಿರತ ಮಹಾನಗರ ಪಾಲಿಕೆ ಸಿಬ್ಬಂದಿ ಮತ್ತು ನೌಕರರು ವಿವಿಧ ಬೇಡಿಕೆಗಳ ಬಗ್ಗೆ ಸಿಎಂ ಸಮ್ಮುಖ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಮತ್ತು ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ. ಹಾಗಾಗಿ, ಮುಷ್ಕರ ಅಂತ್ಯಗೊಳಿಸಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸಚಿವರು ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

ಮಹಾನಗರ ಪಾಲಿಕೆ ನೌಕರರಿಗೂ 7ನೇ ವೇತನ ಆಯೋಗ ವಿಸ್ತರಣೆ, ವೃಂದ ಮತ್ತು ನೇಮಕಾತಿಯಲ್ಲಿ ತಿದ್ದುಪಡಿ , ಕೆಜಿಐಡಿ, ಜಿಪಿಎ್ ಸೌಲಭ್ಯ, ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಮತ್ತು ಮುಂಬಡ್ತಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು.8 ರಿಂದ ದಾವಣಗೆರೆ, ಶಿವಮೊಗ್ಗ, ಮಂಗಳೂರು, ಮೈಸೂರು, ತುಮಕೂರು, ವಿಜಯಪುರ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಯ ಸಾವಿರಾರು ನೌಕರರು ಪ್ರತಿಭಟನೆ ಆರಂಭಿಸಿದ್ದರು. ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್ ಆಶ್ವಾಸನೆ ನೀಡಿದ್ದ ಮೇರೆಗೆ ಬಿಬಿಎಂಪಿ ನೌಕರರು ಜು.8ರಂದೇ ಮುಷ್ಕರ ಕೈಬಿಟ್ಟಿದ್ದರು.

ಸಿಎಂ ಸಿದ್ದರಾಮಯ್ಯ, ಸಚಿವ ಭೈರತಿ ಸುರೇಶ್ ಅವರು ಜು.15ರಂದು ಸಂಘದ ಪದಾಧಿಕಾರಿಗಳು ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದೂಡಲಾಗಿದೆ. ನ್ಯಾಯಯುತ ಬೇಡಿಕೆ ಈಡೇರದಿದ್ದಲ್ಲಿ ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಹೋರಾಟದ ನಿಲುವು ಪ್ರಕಟಿಸಲಾಗುವುದು.

ಎ.ಅಮೃತ್‌ರಾಜ್, ಅಧ್ಯಕ್ಷ, ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net