17ರಂದು ವ್ಯಸನಮುಕ್ತರ ನವಜೀವನೋತ್ಸವ

Alcohol
Published on

ಬೆಳ್ತಂಗಡಿ: ಶ್ರೀ ಕ್ಷೇತ್ರ ಧ.ಗ್ರಾ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ ಆ.17ರಂದು ಬೆಳಗ್ಗೆ 10 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ತುಮಕೂರು ಶ್ರೀ ಕಾರದೇಶ್ವರ ಮಠ, ಬೆಳ್ಳಾವಿ ಇಲ್ಲಿನ ಶ್ರೀ ಕಾರದ ವೀರಬಸವ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ.

ಶಾಸಕ ಹರೀಶ್ ಪೂಂಜಾ ಜಾಗೃತಿ ಅಣ್ಣ/ಮಿತ್ರ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್ ಪಾನಮುಕ್ತ ಗ್ರಾಮ ಸಾಧಕರಿಗೆ ಗೌರವ ಸಲ್ಲಿಸಲಿದ್ದಾರೆ. ಹರೀಶ್ ಕುಮಾರ್ ಗುರುತಿನ ಚೀಟಿ ವಿತರಿಸಲಿದ್ದಾರೆ. ಶ್ರೀ ಕ್ಷೇತ್ರ ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಧರ್ಮಸ್ಥಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಸಂಶೋಧಕರನ್ನು ಸನ್ಮಾನಿಸಲಿದ್ದಾರೆ.

ಜನಜಾಗೃತಿ ವೇದಿಕೆ ಬೆಳ್ತಂಗಡಿ ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಟ್ರಸ್ಟಿಗಳಾದ ಡಾ.ಪಿ.ವಿ ಭಂಡಾರಿ, ಡಾ.ಶ್ರೀನಿವಾಸ್ ಭಟ್, ವಿ.ರಾಮಸ್ವಾಮಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ/ಕಾರ್ಯದರ್ಶಿ ವಿವೇಕ್ ವಿ. ಪಾಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಮೂ. ಕೊರವಿ ಮೊದಲಾದವರು ಉಪಸ್ಥಿತರಿರಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net