More

    28ರಂದು ಕಂಪ್ಯೂಟರ್ ಪ್ರಾಯೋಗಿಕ ಪರೀಕ್ಷೆ

    ಬೆಳಗಾವಿ: ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಜು. 28ರಂದು ಕಂಪ್ಯೂಟರ್ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ (1:5 ರಂತೆ) ಆಯ್ಕೆಯಾದ ಅಭ್ಯರ್ಥಿಗಳಿಗೆ ಜುಲೈ 28ರಂದು ಖಾನಾಪುರ ರಸ್ತೆಯ ಆರ್‌ಪಿಡಿ ಕ್ರಾಸ್‌ನ ಜೈನ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.

    ಪ್ರವೇಶ ಪತ್ರವನ್ನು ಈಗಾಗಲೇ ನೋಂದಾಯಿತ ಅಂಚೆ ಮೂಲಕ ರವಾನಿಸಲಾಗಿದೆ. ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ ಸಂಯೋಜಕ ಹುದ್ದೆ -1, ಜಿಲ್ಲಾ ಯೋಜನಾ ಸಹಾಯಕ ಹುದ್ದೆ -1, ಬ್ಲಾಕ್ ಯೋಜನಾ ಸಂಯೋಜಕ ಹುದ್ದೆ-14 ಮತ್ತು ಬ್ಲಾಕ್ ಯೋಜನಾ ಸಹಾಯಕ -14 ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು 2019ರ ಡಿ. 31ರಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿತ್ತು.

    ಸ್ವೀಕೃತವಾದ ಅರ್ಜಿಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಹಾಗೂ ಸೇವಾ ಅನುಭವ, ಕಂಪ್ಯೂಟರ್ ಜ್ಞಾನದ ಪ್ರಮಾಣ ಪತ್ರಗಳ ಆಧಾರದ ಮೇಲೆ 1:5 ರಂತೆ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಜುಲೈ 15ರಂದು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಮಾಹಿತಿಗೆ ದೂ: 0831-2407236ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts