ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಕ್ರವಾರ ಅತ್ಯಂತ ಮಹತ್ವದ ದಿನ. ಅವರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಇದೇ ದಿನ ನೀಡಲಿದೆ. ಈ ಅರ್ಜಿಯಲ್ಲಿ, ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನದ ಕಾನೂನುಬದ್ಧತೆಯನ್ನು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕರಿಗೆ ಇಡಿ ಡ್ರಿಲ್, ಸಚಿವ ಎಂ.ಬಿ. ಪಾಟೀಲರು ಏನಂದ್ರು ಗೊತ್ತಾ?
ಮೇ 17ರಂದು ಕೇಜ್ರಿವಾಲ್ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರನ್ನು ಇಡಿ ಮಾರ್ಚ್ 21 ರಂದು ಬಂಧಿಸಿತ್ತು. .
ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಯಲ್ಲಿ ಕೇಜ್ರಿವಾಲ್, ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ತನ್ನ ಬಂಧನವು “ರಾಜಕೀಯ ಕಾರಣಗಳಿಂದ ಪ್ರೇರಿತವಾಗಿದೆ” ಎಂದು ಮಾ.18 ರಂದು ವಾದಿಸಿದ್ದರು. ಪ್ರಕರಣದಲ್ಲಿ ಅವರ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಏಪ್ರಿಲ್ 9 ರ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.