

ಬೆಂಗಳೂರು: ಸಮಾಜವಾದ ಚಿಂತಕ ಹಾಗೂ ಹಿರಿಯ ಮುತ್ಸದ್ದಿ ಎಂ.ಪಿ.ಪ್ರಕಾಶ್‌ರವರ 84ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಶರಣ ಸಾಹಿತ್ಯ ಪರಿಷತ್‌ನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಯನಗರದ 8ನೇ ವಿಭಾಗದಲ್ಲಿರುವ ಜೆಎಸ್‌ಎಸ್ ಕಾಲೇಜು ಸಭಾಂಗಣದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಉದ್ಘಾಟಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿ ಮತ್ತು ಬೆಂಗಳೂರು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಂಕಣಕಾರರಾದ ಕೆ.ಎಸ್.ನಾಗರಾಜ್, ಕದಳಿ ವೇದಿಕೆ ಅಧ್ಯಕ್ಷೆ ಪ್ರಮೀಳಾ ಗರಡಿ, ಜಯನಗರ ಘಟಕದ ಅಧ್ಯಕ್ಷೆ ಸುಧಾ ನಾಗರಾಜ್, ಜಯನಗರ ಶಸಾಪ ಅಧ್ಯಕ್ಷ ವಿಜಯಕುಮಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.