ಈ ದಿನದಂದು ರಿಲೀಸ್ ಆಗಲಿದೆ ಐಕಾನ್​ ಸ್ಟಾರ್​ ನಟನೆಯ 'ಪುಷ್ಪಾ 2'?

Untitled design (66)
Published on

ಆಂಧ್ರಪ್ರದೇಶ: ತೆಲುಗು ಚಿತ್ರರಂಗದ ಸ್ಟೈಲಿಶ್ ಸ್ಟಾರ್​ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ 'ಪುಷ್ಪಾ 2' ಸಿನಿಮಾ 2024 ರಲ್ಲಿ ಚಿತ್ರಮಂದಿರಗಳಲ್ಲಿ ರಾರಾಜಿಸಲಿದೆ ಎಂಬ ವದಂತಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಸುಕುಮಾರ್ ನಿರ್ದೇಶನದ 'ಪುಷ್ಪಾ 2' ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರನ್ನು ವಿಶಿಷ್ಟವಾಗಿ ಅಭಿಮಾನಿಗಳಿಗೆ ತೋರಿಸಬೇಕು ಎಂದು ಕಸರತ್ತು ಮಾಡುತ್ತಿರುವ ನಿರ್ದೇಶಕರು, ಸಿನಿಮಾದ ಆ್ಯಕ್ಷನ್​ ಸೀಕ್ವೆನ್ಸ್​ಗಳಿಗೆ ಹೆಚ್ಚು ಒತ್ತು ನೀಡಿದ್ದಾರೆ ಎಂಬುದು ತಿಳಿದುಬಂದಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಕೇಳಿಬಂದಿರುವ ವದಂತಿ ಪ್ರಕಾರ, ಚಿತ್ರ 22 ಮಾರ್ಚ್​, 2024 ರಂದು ಬಿಡುಗಡೆಯಾಗಲು ಸಜ್ಜಾಗಿದೆ ಎನ್ನಲಾಗಿದೆ. ಇದೇ ಖಚಿತ ದಿನಾಂಕ ಎಂದು ಹೇಳಲಾಗಿದ್ದು, ಸದ್ಯ ಈ ಬಗ್ಗೆ ಚಿತ್ರತಂಡದಿಂದ ಹೊರಬೀಳುವ ಅಧಿಕೃತ ಮಾಹಿತಿಗಾಗಿ ಕಾಯಬೇಕಿದೆ.

ಗುರುವಾರ (ಆಗಸ್ಟ್​ 24) 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2023 ರಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಐಕಾನ್​ ಸ್ಟಾರ್,​ ಅಲ್ಲು ಅರ್ಜುನ್​ ತಮ್ಮ ಮುಡಿಗೇರಿಸಿಕೊಂಡರು. ಈ ಮುಖೇನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸದ್ಯ 'ಪುಷ್ಪಾ 2' ಚಿತ್ರವು ಇನ್ನೂ ನಿರ್ಮಾಣ ಹಂತದಲ್ಲಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಜಯ್​ ಸೇತುಪತಿ, ಫಹಾದ್​ ಫಾಸಿಲ್​, ಧನಂಜಯ್​, ಪ್ರಕಾಶ್​ ರಾಜ್​, ಅನುಸೂಯಾ ಭಾರಧ್ವಾಜ್​ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net