

ಬೆಂಗಳೂರು: ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ನ ಟ್ವಿಟರ್ ಖಾತೆ ಹೆಚ್ಚು ಸಕ್ರಿಯವಾಗುತ್ತಿದೆ. ಒಂದರ ಹಿಂದೆ ಒಂದರಂತೆ ಟ್ವೀಟ್ ಮಾಡುತ್ತಾ, ರಾಜ್ಯ ಬಿಜೆಪಿಯನ್ನು ಪ್ರಶ್ನಿಸುತ್ತಿದೆ. ಇದೀಗ ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ವ್ಯಂಗ್ಯ ಚಿತ್ರಗಳನ್ನು ಬಳಸಿಕೊಂಡು ಕಾಲೆಳೆಯುವ ಕೆಲಸ ಮಾಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿದ್ದು, ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಹರಿಬಿಟ್ಟಿರುವ ಫೋಟೋಗಳು ಮಾತ್ರ ಇದೀಗ ವೈರಲ್ ಆಗುತ್ತಿವೆ.