

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನ. 11ರಂದು ಬೆಳಗ್ಗೆ 11 ಗಂಟೆಗೆ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿ ಕಾರ್ಯಕ್ರಮವನ್ನು ಎಲ್ಲರೂ ವಿಜೃಂಭಣೆಯಿಂದ ಆಚರಿಸೋಣ ಎಂದರು.
ಹಿರಿಯ ಮುಖಂಡರು, ಸಾರ್ವಜನಿಕರು, ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.