ರಾಯಚೂರು: ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಛಲವಾದಿ ಸಮುದಾಯದಿಂದ ನ.11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಆಚರಿಸಲಾಗುತ್ತದೆ ಎಂದು ಒನಕೆ ಓಬವ್ವ ಜಯಂತ್ಯುತ್ಸವ ಸಮಿತಿ ಸಂಚಾಲಕ ಕೆ.ಇ.ಕುಮಾರ ಹೇಳಿದರು.
ಇದನ್ನೂ ಓದಿ: ಒನಕೆ ಓಬವ್ವ ಜಯಂತಿ 11ರಂದು
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ನಗರದ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೂ ಮೊದಲು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ರಂಗಮಂದಿರವರೆಗೆ ಓಬವ್ವಳ ಭಾವಚಿತ್ರ ಮೆರವಣಿಗೆ ಮಾಡಲಾಗುವುದು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಮಹಾದೇವಿ ಅಮರೇಶ ಗೋಪಾಳಪುರ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮಕ್ಕಾಗಿ ಸಮುದಾಯದಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಪ್ರತಿಯೊಬ್ಬರು ಆಗಮಿಸಿ ಯಶಸ್ವಿಗೊಳಿಸಬೇಕೆಂದರು. ಪ್ರಮುಖರಾದ ಎಂ.ವಸಂತ, ಎಂ.ಮಾರೆಪ್ಪ, ವಿಶ್ವನಾಥ ಪಟ್ಟಿ, ವಿಜಯಕುಮಾರ, ವೀರೇಶ ಇತರರಿದ್ದರು.