

ಮಂಗಳೂರು : ನಗರದ ಕೊಡಿಯಾಲ್ಬೈಲ್ನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ವಾಸ್ತುಶಿಲ್ಪಿ ತಜ್ಞೆ ದೀಪಿಕಾ ಎ ನಾಯಕ್ ಅವರು ದೀಪ ಬೆಳಗಿದರು.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವರ್ಣರಂಜಿತ ಪೂಕಳಂ ರಚಿಸಿದರು. ಉಪನ್ಯಾಸಕರು ಪೂಕಳಂನ ಸುತ್ತ ತಿರುವಾದಿರ ನೃತ್ಯ ಪ್ರದರ್ಶಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಮಚಂದ್ರ ಭಟ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.