More

  ಮತ್ತೊಮ್ಮೆ ಮೋದಿಯನ್ನು ಪ್ರಧಾನಿಯನ್ನಾಗಿಸಲು ಸನ್ನದ್ಧರಾಗಿ

  ಚಿಕ್ಕಮಗಳೂರು: ನಾರಿಶಕ್ತಿಯನ್ನು ರಾಷ್ಟ್ರಶಕ್ತಿಯನ್ನಾಗಿ ರೂಪಿಸಿದ ಹಾಗೂ ಮಹಿಳೆಯರ ದಿನನಿತ್ಯದ ಬದುಕಿಗೆ ವಿವಿಧ ಯೋಜನೆಗಳನ್ನು ನೀಡಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ನಾವೆಲ್ಲರೂ ಸನ್ನದ್ಧರಾಗಬೇಕಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜೆಸಂತಾ ಅನಿಲ್‌ಕುಮಾರ್ ತಿಳಿಸಿದರು.

  ನಗರದ ಬಿಜೆಪಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಮಹಿಳಾ ಮೋರ್ಚಾದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆ ದೇಶದ ಪ್ರಧಾನಿ ಯಾರಾಗಬೇಕು ಎಂದು ನಿರ್ಧರಿಸಬೇಕಾಗಿರುವ ಚುನಾವಣೆಯಾಗಿರುವುದರಿಂದ ನಾವೆಲ್ಲರೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.
  ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ಮಾತನಾಡಿ, ದೇಶದ ಅಭಿವೃದ್ಧಿ ಹಾಗೂ ಉನ್ನತಿಗೆ ಮಹಿಳೆಯರ ಪಾತ್ರ ಬಹುದೊಡ್ಡದಾಗಿದೆ. ತಾವೆಲ್ಲರೂ ತಮ್ಮ ಬೂತ್ ಮಟ್ಟದಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕೇಂದ್ರ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು.
  ಸರಳ, ಸಜ್ಜನ, ಪ್ರಾಮಾಣಿಕ ಹಾಗೂ ಸರಳತೆಗೆ ಹೆಸರಾಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದರು.
  ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪ ಜಿ .ಸುವರ್ಣ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಯೋಜನೆಗಳ ಮಾಹಿತಿಯನ್ನು ಸ್ವಸಹಾಯ ಸಂಘಗಳು, ಯೋಗ ಕೇಂದ್ರಗಳು, ಭಜನಾ ಮಂಡಳಿಯ ಮಹಿಳೆಯರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಸಮುದಾಯಗಳ ಮಹಿಳೆಯರಿಗೆ ಬೂತ್ ಮಟ್ಟದಲ್ಲಿ ತಲುಪಿಸಬೇಕು ಎಂದು ಕರೆನೀಡಿದರು.
  ಜಿಲ್ಲಾ ಉಪಾಧ್ಯಕ್ಷೆ ವೀಣಾ ಆರ್.ಶೆಟ್ಟಿ , ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುನಿತಾ ಜಗದೀಶ್, ಜಿಲ್ಲಾ ಮಹಿಳಾ ಮೋರ್ಚಾ ಪ್ರದಾನ ಕಾರ್ಯದರ್ಶಿಗಳಾದ ಶೃತಿ ರೋಹಿತ್ ರಾಜೇಶ್ವರಿ ರಾಜಶೇಖರ್ ಮತ್ತಿತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts