

ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಬ್ಲಾಕ್ನಲ್ಲಿ ಹೊಸದಾಗಿ ನವೀಕರಿಸಿದ ವೈದ್ಯಕಿಯ ಆಂಕೊಲಾಜಿ ಹೊರರೋಗಿ ವಿಭಾಗ ಮತ್ತು ಕೀಮೋಥೆರಪಿ ಡೇ ಕೇರ್ ಕೇಂದ್ರವನ್ನು ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಅತ್ಯಾಧುನಿಕ ವೈದ್ಯಕಿಯ ಆರೈಕೆಯನ್ನು ಒದಗಿಸಲು ಮತ್ತು ರೋಗಿಗಳ ಸೌಕರ್ಯವನ್ನು ಹೆಚ್ಚಿಸಲು ಸಂಸ್ಥೆಯು ಬದ್ಧವಾಗಿದೆ ಎಂದು ಹೇಳಿದರು.
ಮಾಹೆ ಮಣಿಪಾಲದ ಆರೋಗ್ಯ ವಿಜ್ಞಾನಗಳ ಸಹ ಉಪ ಕುಲಪತಿ ಡಾ. ಶರತ್ ಕೆ. ರಾವ್ ಮಾತನಾಡಿ, ನವೀಕರಿಸಿದ ಸೌಲಭ್ಯಗಳು ರೋಗಿಗಳು ಮತ್ತು ಸಂದರ್ಶಕರಿಗೆ ಆರಾಮದಾಯಕ ಅನುಭವವನ್ನು ಖಾತ್ರಿಪಡಿಸುತ್ತದೆ. ಡೇ ಕೇರ್ ಕೇಂದ್ರವು ಕೀಮೋಥೆರಪಿ ಮತ್ತು ಇತರ ವಿಶೇಷ ಆಂಕೊಲಾಜಿ ಚಿಕಿತ್ಸೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ ಎಂದರು.
ವೈದ್ಯಕಿಯ ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕರಾದ ಡಾ. ಕಾರ್ತಿಕ್ ಉಡುಪ ಮತ್ತು ಡಾ. ಅನಂತ್ ಪೈ ಮಾಹಿತಿ ನೀಡಿದರು. ಸಮಾರಂಭದಲ್ಲಿ ಕಸ್ತೂರ್ಬಾ ವೈದ್ಯಕಿಯ ಕಾಲೇಜು (ಕೆಎಂಸಿ) ಡೀನ್ ಡಾ. ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಸಿ ಓ ಓ ಡಾ. ಆನಂದ್ ವೇಣುಗೋಪಾಲ್ , ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕಿಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಮಣಿಪಾಲ್ ಸಮಗ್ರ ಕ್ಯಾನ್ಸರ್ ಕೇರ್ ಸೆಂಟರ್ ಸಂಯೋಜಕ ಡಾ. ನವೀನ್ ಸಾಲಿನ್ಸ್ ಮತ್ತಿತರರು ಉಪಸ್ಥಿತರಿದ್ದರು.