ಪಶ್ಚಿಮ ಬಂಗಾಳದಲ್ಲಿ ಮತದಾನಕ್ಕೂ ಮೊದಲೇ ಬಿಜೆಪಿ, ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತರ ಸಾವು

ನವದೆಹಲಿ: ಇಂದು ಆರನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಇಬ್ಬರು ಕಾರ್ಯಕರ್ತರು ಮೃತಪಟ್ಟಿದ್ದಾರೆ.

ಮತದಾನ ಪ್ರಾರಂಭವಾಗಲಿರುವ ಕೆಲವೇ ಗಂಟೆಗಳ ಮೊದಲು ಪಶ್ಚಿಮ ಬಂಗಾಳದ ಬೇರೆ ಬೇರೆ ಭಾಗಗಳಲ್ಲಿ ಬಿಜೆಪಿಯ ಓರ್ವ ಹಾಗೂ ತೃಣಮೂಲ ಕಾಂಗ್ರೆಸ್​ ಓರ್ವ ಕಾರ್ಯಕರ್ತರ ಮೃತದೇಹ ಪತ್ತೆಯಾಗಿದೆ.
ಮೃತ ಬಿಜೆಪಿ ಕಾರ್ಯಕರ್ತನನ್ನು ರಮಣ್​ ಸಿಂಗ್​ ಎಂದು ಗುರುತಿಸಲಾಗಿದೆ. ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತರು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟಿದ್ದಾಗಿ ಬಿಜೆಪಿ ಹೇಳುತ್ತಿದೆ. ಆದರೆ, ಮೃತರ ಮೈಮೇಲೆ ಯಾವುದೇ ಗಾಯದ ಗುರುತು ಇಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಶಂಕೆಯಿದೆ ಎಂದು ಹೇಳಿದ್ದಾರೆ.

ಮೃತ ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತನನ್ನು ಸುಧಾಕರ್​ ಮೇಟಿ ಎಂದು ಗುರುತಿಸಲಾಗಿದೆ. ಭಾನುವಾರ ಮುಂಜಾನೆ ಮಾರ್ಧರಾ ಪ್ರದೇಶದಲ್ಲಿ ಅವರ ದೇಹ ಸಿಕ್ಕಿದೆ.

ಇನ್ನಿಬ್ಬರು ಬಿಜೆಪಿ ಕಾರ್ಯಕರ್ತರಾದ ಅನಂತ್​ ಗುಚೈತ್​, ರಂಜಿತ್​ ಮೇಟಿ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಇಬ್ಬರೂ ಚಿಕಿತ್ಸೆ ಪಡೆಯುತ್ತಿರುವುದಾಗಿ ಎಎನ್​ಐ ವರದಿ ಮಾಡಿದೆ.

Leave a Reply

Your email address will not be published. Required fields are marked *