

ಗಂಗೊಳ್ಳಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಮೃತಪಟ್ಟ ಘಟನೆ ಸಮೀಪದ ಕೊಡಪಾಡಿ ಎಂಬಲ್ಲಿ ಭಾನುವಾರ ಸಂಭವಿಸಿದೆ. ಮಹಮ್ಮದ್ ಕೈಸ್ ಕಿದಿಯೂರು (21) ಮೃತರು. ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಂಗೊಳ್ಳಿ ಶಾಹಿ ಮೊಹಲ್ಲಾ ನಿವಾಸಿ ಶೇಖ್ ಆಸಾಸ್ ಎಂಬುವರು ಮಹಮ್ಮದ್ ಕೈಸ್ ಅವರನ್ನು ಬೈಕಿನಲ್ಲಿ ಕೂರಿಸಿಕೊಂಡು ತ್ರಾಸಿಯಿಂದ ಗಂಗೊಳ್ಳಿ ಕಡೆಗೆ ಹೋಗುತ್ತಿದ್ದಾಗ ಕೊಡಪಾಡಿ ಮಾರಿಕಾಂಬಾ ದೇವಸ್ಥಾನ ಸಮೀಪ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಮೊಹಮ್ಮದ್ ಕೈಸ್ ಕಿದಿಯೂರು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಪರೀಕ್ಷಿಸಿದ ವೈದ್ಯರು ಮೊಹಮ್ಮದ್ ಕೈಸ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.