More

    ಲಂಚ ಕೇಳಿದ-ಮಂಚಕ್ಕೂ ಕರೆದ ಇನ್​ಸ್ಪೆಕ್ಟರ್ ವಿರುದ್ಧ ಇನ್ನಿಬ್ಬರು ಮಹಿಳೆಯರಿಂದಲೂ ಆರೋಪ!

    ಬೆಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಿಲುಕಿರುವ ಹೆಣ್ಣೂರು ಠಾಣೆ ಇನ್‌ಸ್ಪೆಕ್ಟರ್ ವಸಂತಕುಮಾರ್, ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. 40ಕ್ಕೂ ಅಧಿಕ ಮಂದಿ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಬಗ್ಗೆ ದೂರು ನೀಡಿದರೂ ಇನ್‌ಸ್ಪೆಕ್ಟರ್ ಯಾವುದೇ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಹೋದರಿಯರಿಬ್ಬರು ಆರೋಪಿಸಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಒಂದು ಭೀಕರ ಅಪಘಾತ, ಮೂವರ ಸಾವು: ಆರೋಪಿ ತಲೆಮರೆಸಿಕೊಂಡಿದ್ದು ಬರೋಬ್ಬರಿ 16 ವರ್ಷ!

    ಕಮ್ಮನಹಳ್ಳಿಯ ಇಬ್ಬರು ಸಹೋದರಿಯರು ಈ ಬಗ್ಗೆ ಆರೋಪಿಸಿದ್ದಾರೆ. ಕಳೆದ ವರ್ಷ ಏ.26ರಂದು ಸ್ಥಳೀಯ ಬಿಜೆಪಿ ನಾಯಕ ಕೃಷ್ಣ ಆನಂದ್, ಸರಿತಾ ಬಾಯಿ, ಪಪ್ಪು, ಮಹೇಂದ್ರ, ಲತಾ ಸೇರಿ 40 ಮಂದಿ ನಿವೇಶನದ ವಿಚಾರವಾಗಿ ಉದ್ದೇಶಪೂರ್ವಕವಾಗಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹಲವು ಚಿನ್ನಾಭರಣ, ನಗದು ಹಾಗೂ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದೇವು. ಆದರೆ, ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಹೋದರಿಯರು ಆರೋಪಿಸಿದ್ದಾರೆ.

    ಇದನ್ನೂ ಓದಿ: ಹೆಣ್ಣೂರಲ್ಲೇ ಹೆಣ್ಣಿಗೆ ಅನ್ಯಾಯ!; ದೂರು ನೀಡಲು ಹೋದರೆ ಲಂಚ ಕೇಳಿದ, ಮಂಚಕ್ಕೂ ಕರೆದ ಪೊಲೀಸ್ ಇನ್​ಸ್ಪೆಕ್ಟರ್​…

    ಸಣ್ಣ ಖಾಲಿ ನಿವೇಶನಯೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲಾಗುತ್ತಿದೆ. ಆದರೆ, ಕೆಲವು ರಿಯಲ್ ಎಸ್ಟೇಟ್ ಮಧ್ಯವರ್ತಿಗಳ ಜತೆ ಪೊಲೀಸರೇ ಶಾಮೀಲಾಗಿ, ಕಾನೂನು ವ್ಯವಸ್ಥೆಯನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತರು ಕ್ರಮ ಕೈಗೊಂಡು, ತಮಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಸಹೋದರಿಯರು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

    ‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts