ಮತ್ತೊಂದು ಭೀಕರ ಅಪಘಾತ; ಅಪ್ಪನ ದಿನದಂದೇ ಇನ್ನೊಂದು ತಂದೆ-ಮಗನ ಸಾವು!

Accident
Published on

ಚಿಕ್ಕಮಗಳೂರು: ರಾಜ್ಯದಲ್ಲಿ ಇಂದು ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಮೂಲಕ ಅಪ್ಪನ ದಿನದಂದೇ ಇಬ್ಬರು ಅಪ್ಪ-ಮಗ ಅಪಘಾತದಲ್ಲಿ ಸಾವಿಗೀಡಾದಂತಾಗಿದೆ.

ಇಂದು ಬೆಳಗ್ಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ರಸ್ತೆಯ ಬಳಿ ಕಾರು-ಕ್ಯಾಂಟರ್​ ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಅಪ್ಪ-ಮಗ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು.

ಇದೀಗ ಚಿಕ್ಕಮಗಳೂರು ಬಳಿ ಸಂಭವಿಸಿದ ಮತ್ತೊಂದು ಭೀಕರ ಅಪಘಾತದಲ್ಲಿ ತಂದೆ-ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ರಾಜಾಜಿನಗರದ ನರಸಿಂಹರಾಜ್ (58), ಕಿರಣ್ (23) ಸಾವಿಗೀಡಾಗಿದ್ದಾರೆ. ಇವರು ಧರ್ಮಸ್ಥಳದಿಂದ ಬೆಂಗಳೂರಿಗೆ ಮರಳುವಾಗ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net