ಹೊತ್ತಿ ಉರಿಯುತ್ತಿದೆ ಮತ್ತೊಂದು ಮನೆ: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಧಾರಾಕಾರ ಮಳೆ, ಇನ್ನೊಂದೆಡೆ ಧಗಧಗಿಸುವ ಬೆಂಕಿ..

ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ, ಹೊತ್ತಿ ಉರಿದ ಎರಡಂತಸ್ತಿನ ಮನೆ #FireinHouse #FireAccident #Bengaluru - youtube
Published on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಒಂದೆಡೆ ಕಟ್ಟಡಗಳು ಕುಸಿತಕ್ಕೆ ಒಳಗಾಗುತ್ತಿದ್ದರೆ, ಮತ್ತೊಂದೆಡೆ ಅಗ್ನಿ ಆಕಸ್ಮಿಕಕ್ಕೆ ತುತ್ತಾಗುತ್ತಿರುವ ಪ್ರಕರಣಗಳೂ ಬೆಳಕಿಗೆ ಬರುತ್ತಿವೆ. ಕೆಲವು ದಿನಗಳ ಹಿಂದಷ್ಟೇ ಅಪಾರ್ಟ್​ಮೆಂಟ್​ವೊಂದಕ್ಕೆ ಬೆಂಕಿ ಬಿದ್ದು ಇಬ್ಬರು ಜೀವ ಕಳೆದುಕೊಂಡಿದ್ದರು. ಇದೀಗ ಮತ್ತೊಂದು ಕಟ್ಟಡಕ್ಕೆ ಬೆಂಕಿ ಬಿದ್ದಿದೆ.

ಬೆಂಗಳೂರಿನ ಶಾಂತಿನಗರದ ನಂಜಪ್ಪ ಸರ್ಕಲ್​ ಸಮೀಪದ ಎರಡಂತಸ್ತಿನ ಮನೆಯೊಂದರಲ್ಲಿ ಬೆಂಕಿಯ ಕೆನ್ನಾಲಗೆ ಹೊರಗೆ ಚಾಚಿದ್ದು, ಜ್ವಾಲೆ ಧಗಧಗಿಸಲಾರಂಭಿಸಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿರುವ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.

ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಸದ್ಯದ ಮಾಹಿತಿ ಪ್ರಕಾರ ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂಬುದು ತಿಳಿದು ಬಂದಿದೆ. ಬೆಂಕಿ ಉಂಟಾಗಲು ಕಾರಣ, ಬೆಂಕಿಯಿಂದ ಆಗಿರುವ ನಷ್ಟ ಇತ್ಯಾದಿ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. ಇನ್ನೊಂದೆಡೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು, ಸಂಚಾರ ದಟ್ಟಣೆ ಸಮಸ್ಯೆಯೂ ಕಾಣಿಸತೊಡಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net