More

    ಕಾರು-ಬೈಕ್ ಭೀಕರ ಅಪಘಾತ; ಬೈಕ್​ ಸವಾರ ಸ್ಥಳದಲ್ಲೇ ಸಾವು

    ತುಮಕೂರು: ಕಾರು-ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

    ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹೊರವಲಯದ ಶ್ಯಾವಿಗೆಹಳ್ಳಿ ಬಳಿ ಇಂದು ಈ ಅಪಘಾತ ಸಂಭವಿಸಿದೆ. ಬೈಕ್ ಸವಾರ ಚಿಕ್ಕನಾಯಕನಹಳ್ಳಿ ಪಟ್ಟಣದ ಶಿವಪ್ಪನಗುಡಿ‌ಯ ನಿವಾಸಿ ಮೈಲಾರಿ (43) ಸ್ಥಳದಲ್ಲೇ ಸಾವಿಗೀಡಾದ ವ್ಯಕ್ತಿ.

    ಇದನ್ನೂ ಓದಿ: ಸಿಡಿದೆದ್ದ ಹಿಂದೂಪರ ಕಾರ್ಯಕರ್ತರು: ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

    ಬೈಕ್ ಚಲಾಯಿಸುತ್ತಿದ್ದ ಮೈಲಾರಿ ಬೈಕ್​-ಕಾರು ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾದರೆ, ಹಿಂಬದಿ ಕುಳಿತಿದ್ದ ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts