ಕೊಚ್ಚಿ: ಚೀನಾದಲ್ಲಿ ಈಗಾಗಲೇ 26 ಮಂದಿಯನ್ನು ಬಲಿಪಡೆದಿರುವ ಡೆಡ್ಲಿ ಕೊರೊನಾ ವೈರಸ್ ಕೇರಳಕ್ಕೂ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ.
ಶಂಕಿತ ಕೊರೊನಾ ವೈರಸ್ ಸೋಂಕಿತ ಯುವಕನೋರ್ವನನ್ನು ಕಲಾಮೆಸ್ಸರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು ಇತ್ತೀಚೆಗಷ್ಟೇ ಚೀನಾದಿಂದ ವಾಪಸಾಗಿದ್ದ. ಅತಿಯಾದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ. ಕೊಚ್ಚಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಈತನಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜಿಗೆ ಶಿಫ್ಟ್ ಮಾಡಲಾಗಿದೆ.
ವಿದ್ಯಾರ್ಥಿಯನ್ನು ಪ್ರತ್ಯೇಕ ವಾರ್ಡ್ನಲ್ಲಿ ಅಬ್ಸರ್ವೇಶನ್ನಲ್ಲಿ ಇಡಲಾಗಿದೆ. ರಕ್ತದ ಮಾದರಿಯನ್ನು ಸಂಗ್ರಹಿಸಿ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ವ್ಯದ್ಯಕೀಯ ಮೂಲಗಳು ತಿಳಿಸಿವೆ. (ಏಜೆನ್ಸೀಸ್)