ಪಾಕ್​ನ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮ

ನವದೆಹಲಿ: ಪಾಕಿಸ್ತಾನದ ಸೇನಾಪಡೆಗಳು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆ ಬಳಿಯ ಗಡಿ ನಿಯಂತ್ರಣ ರೇಖೆಯ ಸಮೀಪ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಗಡಿಭಾಗದ ಗ್ರಾಮಸ್ಥರೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಭದ್ರತಾ ಪಡೆ ಅಧಿಕಾರಿಗಳು ಗುರುವಾರ ಈ ಬಗ್ಗೆ ಮಾಹಿತಿ ನೀಡಿದ್ದು, ಬುಧವಾರ ತಡರಾತ್ರಿ ಪಾಕ್​ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದರು. ತಾರ್​ಕುಂಡಿ ವಲಯದಲ್ಲಿ ಭಾರಿ ಶೆಲಿಂಗ್​ ದಾಳಿ ಸಂಘಟಿಸಿದ್ದರು. ಈ ದಾಳಿಯ ವೇಳೆ ಗಡಭಾಗದಲ್ಲಿ ಪಹರೆ ಕಾಯುತ್ತಿದ್ದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು … Continue reading ಪಾಕ್​ನ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮ