More

    ಒಂದು ಸಾವಿರ ಕೋಟಿ ರೂ. ಅನುದಾನ ಕೋರಿ ಪ್ರಸ್ತಾವನೆ

    ಮದ್ದೂರು: ಕ್ಷೇತ್ರದಲ್ಲಿ ನೀರಾವರಿ, ರಸ್ತೆ ಮತ್ತು ಕೆರೆಕಟ್ಟೆಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

    ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಶುಕ್ರವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನನ್ನ ಮನವಿ ಮೇರೆಗೆ ತಾತ್ಕಾಲಿಕವಾಗಿ ಸರ್ಕಾರ ಮದ್ದೂರು ಕ್ಷೇತ್ರದ ಅಭಿವೃದ್ಧಿಗಾಗಿ 285 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಉಳಿದ ಅನುದಾನವನ್ನು ಲೋಕಸಭಾ ಚುನಾವಣೆ ನಂತರ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದರು.

    ಕ್ಷೇತ್ರದ ರಸ್ತೆ, ಚರಂಡಿ, ನೀರಾವರಿ ಯೋಜನೆಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಕುಡಿವ ನೀರಿನ ಸಮಸ್ಯೆ ನಿವಾರಣೆಗಾಗಿ ಈಗಾಗಲೇ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ. ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವಂತೆ ಸೂಚನೆ ನೀಡಲಾಗಿದೆ. ಆದ್ಯತೆ ಮೇರೆಗೆ ಕೊಳವೆಬಾವಿಗಳನ್ನು ಕೊರೆಸುವ ಜತೆಗೆ ರೈತರ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ನೀರು ಪೂರೈಸಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಉದಯ ಸ್ಪಷ್ಟಪಡಿಸಿದರು.

    ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಗ್ರಾಪಂ ಅಧ್ಯಕ್ಷ ಈಶ್ವರ, ಸದಸ್ಯರಾದ ಶಿವು, ಅಶೋಕ್, ಮಹಮ್ಮದ್ ಬಕ್ಷಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts