More

    ಅರಣ್ಯಾಧಿಕಾರಿಯ ಗುಂಡೇಟಿಗೆ ಗಂಧದ ಕಳ್ಳ ಬಲಿ; ತಡೆಯಲು ಬಂದ ಅರಣ್ಯ ಸಿಬ್ಬಂದಿ ಮೇಲೇ ಹಲ್ಲೆ ಮಾಡಿದ ಶ್ರೀಗಂಧಚೋರರು

    ಕುಣಿಗಲ್: ಆತ್ಮರಕ್ಷಣೆಗಾಗಿ ಶ್ರೀಗಂಧ ಚೋರರ ಮೇಲೆ ಅರಣ್ಯಾಧಿಕಾರಿಗಳು ಹಾರಿಸಿದ ಗುಂಡೇಟಿಗೆ ಕಳ್ಳನೋರ್ವ ಬಲಿಯಾಗಿದ್ದಾನೆ. ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಕಂಪಲಾಪುರ ಶ್ರೀಗಂಧ ಮೀಸಲು ಅರಣ್ಯ ಪ್ರದೇಶದಲ್ಲಿ ಶನಿವಾರ ಈ ಪ್ರಕರಣ ನಡೆದಿದೆ.

    ತಾಲೂಕಿನ ಕಂಪಾಲಾಪುರ ಶ್ರೀಗಂಧ ಮೀಸಲು ಆರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯಿಂದ ಶ್ರೀಗಂಧದ ಪ್ಲಾಂಟೇಷನ್​ ಮಾಡಲಾಗಿದೆ. ಸುಮಾರು 1500 ಶ್ರೀಗಂಧದ ಮರಗಳು ಇಲ್ಲಿವೆ. ಶನಿವಾರ ಬೆಳಗ್ಗೆ 9.30ರಲ್ಲಿ ಶ್ರೀಗಂಧ ಚೋರರು ಗಂಧದ ಮರಗಳನ್ನು ಕತ್ತರಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಕಳ್ಳರು ಅರಣ್ಯ ಸಿಬ್ಬಂದಿಯ ಮೇಲೆ ಮಚ್ಚು ಹಾಗೂ ಕಲ್ಲುಗಳಿಂದ ಹಲ್ಲೆ ಮಾಡಿದ್ದು, ಆಗ ಸ್ವಯಂರಕ್ಷಣೆಗೆ ಗುಂಡು ಹಾರಿಸಿದ್ದಾರೆ.

    ಸ್ಥಳದಲ್ಲೇ ಗಂಧದ ಕಳ್ಳ ಬಲಿ: ಶ್ರೀಗಂಧದ ಚೋರರು ಗಂಧದ ಮರಗಳನ್ನು ಕಡಿದು ಹೊತ್ತೊಯ್ಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮುಖಾಮುಖಿಯಾಗಿದ್ದು ಕಳ್ಳರನ್ನು ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ಅವರು ತಮ್ಮ ಬಳಿಯಿದ್ದ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಇದರಲ್ಲಿ ವನಪಾಲಕ ಶೇಖರ್ ಗಾಯಗೊಂಡಿದ್ದು ತಕ್ಷಣವೇ ಡಿಆರ್‌ಎಫ್‌ಒ ಮಹೇಶ್ ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅದಕ್ಕೂ ಜಗ್ಗದ ಕಳ್ಳರು ದಾಳಿಗೆ ಮುಂದಾಗಿದ್ದು ಆತ್ಮರಕ್ಷಣೆಗಾಗಿ ನೇರವಾಗಿ ಕಳ್ಳರತ್ತ ಗುಂಡು ಹಾರಿಸಿದಾಗ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಳಿದ ಮೂವರು ಅಲ್ಲಿಂದ ಪರಾರಿಯಾಗಿದ್ದಾರೆ. ಆರ್‌ಎಫ್‌ಒ ಮಹಮದ್ ಮನ್ಸೂರ್ ಅವರ ನೇತೃತ್ವದ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದೆ.

    ಇದನ್ನೂ ಓದಿ: ಟೇಬಲ್ ಮೇಲಿತ್ತು ಮೂರು ಟೀ ಕಪ್​; ದಂಪತಿಯನ್ನು ಪರಿಚಿತರೇ ಕೊಂದರಾ?

    ಅರಣ್ಯಾಧಿಕಾರಿಗಳ ಗುಂಡಿಗೆ ಬಲಿಯಾದ ಶ್ರೀಗಂಧ ಚೋರನ ಗುರುತು ಈವರೆಗೆ ಪತ್ತೆಯಾಗಿಲ್ಲ. ಸುಮಾರು 30 ವರ್ಷ ವಯಸ್ಸಿನವನಾಗಿದ್ದು ಪಂಚನಾಮೆ ನಡೆಸಲಾಗಿದೆ. ಹುಲಿಯೂರು ದುರ್ಗ ಠಾಣೆಯಲ್ಲಿ ಈ ಪ್ರಕರಣದ ದೂರು ದಾಖಲಿಸಲಾಗಿದೆ ಎಂದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

    ಡಿಸಿ, ಎಸ್ಪಿ ಭೇಟಿ: ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರವಾಡ್, ಉಪವಿಭಾಗಾಧಿಕಾರಿ ವಿ.ಅಜಯ್, ಡಿಎಫ್‌ಒ ಡಾ.ರಮೇಶ್, ಎಸಿಎಫ್ ಚಿಕ್ಕರಾಜು, ತಹಸೀಲ್ದಾರ್ ಮಹಾಬಲೇಶ್ವರ್, ಡಿವೈಎಸ್‌ಪಿ ರಮೇಶ್ ಹಾಗೂ ಸಿಪಿಐ ಗುರುಪ್ರಸಾದ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

    ‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..

    ‘ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಬ್ಲ್ಯಾಕ್​ಮೇಲ್​ ಮಾಡಿದ ಅಪರಿಚಿತ

    ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts