28.5 C
Bengaluru
Monday, January 20, 2020

ಈರುಳ್ಳಿ ಬೆಲೆ ಏರಿದ್ದರೂ ರೈತರಿಗೆ ಲಾಭವಾಗುತ್ತಿಲ್ಲ ಏಕೆ?: ಇಲ್ಲಿವೆ ಕೆಲ ಕಾರಣಗಳು

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ನಾಸಿಕ್​ (ಮಹಾರಾಷ್ಟ್ರ): ಈರುಳ್ಳಿ ಬೆಲೆ ಗ್ರಾಹಕರಿಗೆ ಕಣ್ಣೀರು ತರಿಸಿದೆ. ಹಿಂದೆಂದೂ ಆಗಿರದಷ್ಟು ಬೆಲೆ ಏರಿಕೆಯಾಗಿದ್ದು, ದೇಶದ ಎಲ್ಲ ಭಾಗಗಳಲ್ಲೂ 150ರಿಂದ 200ರ ಗಡಿ ತಲುಪಿದೆ.

ಇದರಿಂದ ಜನ ಸಾಮಾನ್ಯರಿಗೆ ಹೊರೆಯಾಗಿದೆ. ಆದರೆ ರೈತರಿಗೆ ಇದರಿಂದ ಲಾಭವಾಗುತ್ತಿದೆಯಾ? ಈ ಪ್ರಶ್ನೆಗೆ ಉತ್ತರ ಕೂಡ ಇಲ್ಲ!

ನಾಸಿಕ್​ನ ಮಾರುಕಟ್ಟೆಯಲ್ಲಿ ದಿನವೊಂದಕ್ಕೆ 15 ಸಾವಿರದಿಂದ 20 ಸಾವಿರ ಕ್ವಿಂಟಾಲ್​ ವರೆಗೆ ಈರುಳ್ಳಿ ವಹಿವಾಟು ನಡೆಯುತ್ತಿತ್ತು. ಆದರೆ ಈಗ ಕೇವಲ 6 ಸಾವಿರ ಕ್ವಿಂಟಾಲ್​ ವಹಿವಾಟು ನಡೆಯುತ್ತಿದೆ. ಅಂದರೆ ಮಾರುಕಟ್ಟೆ ಖಾಲಿ ಖಾಲಿಯಾಗಲು ಕಾರಣ ಅಕಾಲಿಕ ಮಳೆ. ಇದರಿಂದ ಈರುಳ್ಳಿ ಬೆಳೆ ಅಪಾರ ಹಾನಿಯಾಗಿದೆ.

ಇಷ್ಟು ಬೆಲೆ ಏರಿಕೆಯಾದರೂ ರೈತರಿಗೆ ಸಿಗುತ್ತಿರುವುದು ಕೇವಲ ಶೇ. 20 ರಿಂದ 30ರಷ್ಟು ಹೆಚ್ಚು ಆದಾಯ. ಸಾಮಾನ್ಯವಾಗಿ 10 ಕ್ವಿಂಟಾಲ್​ ಈರುಳ್ಳಿ ಬೆಳೆಯುತ್ತಿದ್ದ ರೈತನ ಕೈಗೆ ಸಿಗುತ್ತಿದ್ದು ಕೇವಲ 2 ರಿಂದ 4 ಕ್ವಿಂಟಾಲ್ ಮಾತ್ರ​. ಬೆಳೆದ ಅಷ್ಟು ಈರುಳ್ಳಿಯನ್ನು ರೈತ ಮಾರುಕಟ್ಟೆಗೆ ತಂದಿದ್ದರೆ ರೈತನಿಗೆ ಅಪಾರ ಲಾಭ ತರುತ್ತಿತ್ತು. ಕಡಿಮೆ ಬೆಲೆಗೆ ಈರುಳ್ಳಿ ಮಾರಾಟವಾದಾಗ ಅದು ಸುದ್ದಿಯೇ ಆಗಿರಲಿಲ್ಲ. ಆದರೆ ಈಗ ನೋಡಿ ಎಲ್ಲೆಡೆ ಈರುಳ್ಳಿಯದ್ದೇ ಸುದ್ದಿ ಎಂದು ಬೇಸರ ವ್ಯಕ್ತಪಡಿಸುತ್ತಾರೆ ನಾಸಿಕ್​ ರೈತರು.

ಈರುಳ್ಳಿ ಬೆಳೆಗಾರ ಶಂಕರ್​, ಕಡಿಮೆ ಬೆಲೆ ಇದ್ದಾಗ ಈರುಳ್ಳಿ ಮಾರಾಟ ಮಾಡಿದೆ. ಆಗ ನನಗೆ ನಷ್ಟವಾಯಿತು. ಆದರೆ ಈರುಳ್ಳಿಯನ್ನು ಈ ಮಳೆಯಿಂದ ರಕ್ಷಿಸುವುದು ಕಷ್ಟಸಾಧ್ಯ. ಮಳೆಯಲ್ಲಿ ಈರುಳ್ಳಿ ತೊಯ್ದರೆ ಕೊಳೆಯಲು ಆರಂಭಿಸುತ್ತದೆ. ಆದ್ದರಿಂದ ಅನಿವಾರ್ಯವಾಗಿ ಮಾರಾಟ ಮಾಡಬೇಕಾಯಿತು ಎನ್ನುತ್ತಾರೆ.

ಡಿಸೆಂಬರ್​ ಕೊನೆ ವಾರದಲ್ಲಿ ಹೊಸ ಬೆಳೆ ಬರುತ್ತದೆ. ಆಗ ಬೆಲೆ ಇಳಿಮುಖವಾಗುವ ಸಾಧ್ಯತೆ ಇದೆ. ಆತಂಕ ಬೇಡ ಎನ್ನುತ್ತಾರೆ ಈರುಳ್ಳಿ ಮಾರಾಟಗಾರ ಮನೋಜ್​ ಜೈನ್​.

ಆದರೆ ಸರ್ಕಾರದ ಕ್ರಮ ಕೂಡ ಈರುಳ್ಳಿ ಬೆಲೆಯನ್ನು ನಿರ್ಧರಿಸುತ್ತದೆ. ಬೆಲೆ ಇಳಿಕೆಗೆ ಅಮದು ಮಾಡಿಕೊಳ್ಳುವುದು ಅನಿವಾರ್ಯ. ಆಗ ಬೆಲೆ ಕಡಿಮೆಯಾಗುತ್ತದೆ. ಆದರೆ ದೇಶದಲ್ಲಿ ಬೆಳೆದ ಈರುಳ್ಳಿ ಬೆಲೆಯೂ ಕಡಿಮೆಯಾಗುತ್ತದೆ ಎನ್ನುವ ಆತಂಕ ಸ್ಥಳಿಯ ರೈತರದ್ದು. (ಏಜೆನ್ಸಿಸ್​)

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...