ಬೆಂಗಳೂರು: ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್‌ನ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು, ಸರ್ಕಾರಿ ಫಾರ್ಮಸಿ ಕಾಲೇಜಿನಲ್ಲಿ ಡಿ.ಫಾರ್ಮಾ ಕೋರ್ಸ್ ಮತ್ತು 2024 ರ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಫಾರ್ಮಸಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳಿಗೆ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅ.14 ರಿಂದ 30ರ ರವರೆಗೆ ಅವಕಾಶವಿರುತ್ತದೆ. ದಾಖಲೆ ಪರಿಶೀಲನೆ ಮತ್ತು ಕೌನ್ಸೆಲಿಂಗ್ ದಿನಾಂಕಗಳನ್ನು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ತಿಳಿಸಲಾಗುತ್ತದೆ.
ದ್ವಿತೀಯ ಪಿಯುಸಿ ಅಥವಾ ತತ್ಸಮಾನವಾದ ವಿಜ್ಞಾನ ವಿಷಯಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರವನ್ನು ಗಣಿತದೊಂದಿಗೆ ತೇರ್ಗಡೆಯಾಗಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗೆ www.beadpharmacy.org ಇಮೇಲ್: [email protected] , [email protected] ಹಾಗೂ ದೂ.08022270666 ಸಂಪರ್ಕಿಸುವಂತೆ ಔಷಧ ನಿಯಂತ್ರಣ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.