More

    ಶೇ.10 ಮಾನಸಿಕ ರೋಗಿಗಳಿಗೆ ಮಾತ್ರ ಚಿಕಿತ್ಸೆ: ಜಡ್ಜ್ ಕಳವಳ

    ಶಿವಮೊಗ್ಗ: ಸಮಾಜದಲ್ಲಿ ಬಹುಪಾಲು ಜನರು ಒಂದಲ್ಲಾ ಒಂದು ವಿಷಯಕ್ಕೆ ಮಾನಸಿಕ ಸಮಸ್ಯೆಗೆ ಒಳಗಾಗಿರುತ್ತಾರೆ. ಅಂತಹವರಿಗೆ ಸಕಾಲಿಕ ಸಮಾಲೋಚನೆ ಹಾಗೂ ಚಿಕಿತ್ಸೆ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್.ಚಂದನ್ ಅಭಿಪ್ರಾಯಪಟ್ಟರು.

    ಜಿಲ್ಲಾಡಳಿತದಿಂದ ಮಂಗಳವಾರ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಆಸೆ, ನಿರೀಕ್ಷೆಗಳು ಅಧಿಕವಾದಂತೆ ಮಾನಸಿಕ ಒತ್ತಡಗಳು ಹೆಚ್ಚುತ್ತವೆ. ಅಗತ್ಯವಿರುವವರಿಗೆ ಸುತ್ತಲಿನ ಜನರು ಸಹಾಯ ಒದಗಿಸಿ ಅವರ ಮಾನಸಿಕ ಆರೋಗ್ಯ ಉತ್ತಮವಾಗಲು ಸಹಕರಿಸಬೇಕೆಂದರು.
    ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಮತ್ತೊಬ್ಬರಿಗೆ ಸಹಾಯ ಮಾಡುವುದು ಹೇಗೆ ಎಂಬ ಬಗ್ಗೆ ಸಮಾಜದೊಳಗೆ ಚರ್ಚೆ ನಡೆಯಬೇಕಾದ ಅವಶ್ಯಕತೆಯಿದೆ. ಮಾನಸಿಕ ಕಾಯಿಲೆಯಿಂದ ನರಳುತ್ತಿರುವ ಯಾವುದೇ ವಯೋಮಾನದ ಮಹಿಳೆಯರ ಸುರಕ್ಷತೆಯ ಬಗ್ಗೆ ತುರ್ತು ಗಮನಹರಿಸಬೇಕಾದ ಅಗತ್ಯವಿದೆ. ಸಂತ್ರಸ್ತರಿಗೆ ಉತ್ತಮ ವಾತಾವರಣ ಕಲ್ಪಿಸಬೇಕಾದ್ದು ಎಲ್ಲರ ಕರ್ತವ್ಯ ಎಂದರು.
    ಮಾನಸಿಕ ಅನಾರೋಗ್ಯಕ್ಕೆ ಒಳಗಾದ ಶೇ.10 ಜನರಿಗೆ ಮಾತ್ರ ಚಿಕಿತ್ಸೆ ದೊರೆಯುತ್ತಿದೆ. ಉಳಿದವರಿಗೆ ಚಿಕಿತ್ಸೆಯೇ ದೊರೆಯುತ್ತಿಲ್ಲ. ತಜ್ಞ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಅಂತಹವರನ್ನು ಗುರುತಿಸಿ, ಚಿಕಿತ್ಸೆ ನೀಡಿ ಸಮಾಲೋಚನೆ ನಡೆಸಿದರೆ ಸಮಸ್ಯೆಗೆ ಅಲ್ಪಮಟ್ಟಿನ ಪರಿಹಾರ ದೊರೆಯಲಿದೆ ಎಂದ ಹೇಳಿದರು.
    ಡಿಎಚ್‌ಒ ಡಾ. ರಾಜೇಶ್ ಸುರಗೀಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸಿಮ್ಸ್ ನಿರ್ದೇಶಕ ಡಾ. ವಿ.ವಿರೂಪಾಕ್ಷಪ್ಪ, ಜಿಲ್ಲಾ ಸರ್ಜನ್ ಡಾ. ಸಿದ್ಧನಗೌಡ ಪಾಟೀಲ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಒ.ಮಲ್ಲಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts