26.8 C
Bangalore
Friday, December 13, 2019

ಕರ್ತಾರ್‌ಪುರ ಗುರುದ್ವಾರಕ್ಕೆ ದಿನಕ್ಕೆ 500 ಯಾತ್ರಿಗಳಿಗೆ ಪ್ರವೇಶ ಕಲ್ಪಿಸಲು ಕರಡು ಸಿದ್ಧಪಡಿಸಿದ ಪಾಕ್‌

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಇಸ್ಲಮಾಬಾದ್‌: ಕರ್ತಾರ್‌ಪುರ ಕಾರಿಡಾರ್‌ ಮೂಲಕ ಗುರುದ್ವಾರಕ್ಕೆ ಭಾರತದಿಂದ ತೆರಳುವ ಸಿಖ್‌ ಯಾತ್ರಿಕರಿಗೆ ದಿನಕ್ಕೆ 500 ಜನರಿಗೆ ಮಾತ್ರ ಅವಕಾಶ ಕಲ್ಪಿಸಿ, ಯಾತ್ರಾರ್ಥಿಗಳ ಮಾಹಿತಿಯನ್ನು ಸಂಗ್ರಹಿಸುವ ಕರಡನ್ನು ಪಾಕಿಸ್ತಾನ ರಚಿಸುತ್ತಿದ್ದು, ಒಪ್ಪಂದದ ಸಹಿಗಾಗಿ ಭಾರತಕ್ಕೆ ಕಳುಹಿಸಲು ಚಿಂತನೆ ನಡೆಸಿದೆ.

ಈ ಒಪ್ಪಂದದಲ್ಲಿ, ಕರ್ತಾರ್‌ಪುರ ಕಾರಿಡಾರ್‌ ಮೂಲಕ ಪ್ರವೇಶ ಬಯಸುವ ಸಿಖ್‌ ಯಾತ್ರಾರ್ಥಿಯು ಮೂರು ದಿನಗಳ ಮುಂಚಿತವಾಗಿ ಸರಿಯಾದ ಮಾಹಿತಿ ಒದಗಿಸಬೇಕು ಮತ್ತು ಭಾರತದ ಕಡೆಯಿಂದ ಯಾತ್ರಿಯ ಪ್ರವೇಶಕ್ಕೂ ಮುನ್ನ ಭದ್ರತಾ ಕ್ಲಿಯರೆನ್ಸ್ ಅಗತ್ಯವಿರುತ್ತದೆ.

ಇಂತದ್ದೊಂದು ಕರಡು ಪ್ರಸ್ತಾವದ ಕುರಿತು ಪಾಕಿಸ್ತಾನದ ಮಾಧ್ಯಮಗಳಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಯಾತ್ರಿಗಳ ಪ್ರವೇಶವನ್ನು ನಿರಾಕರಿಸುವ ಸಂಪೂರ್ಣ ಹಕ್ಕನ್ನು ಪಾಕ್‌ ಹೊಂದಿರುತ್ತದೆ. ಯಾತ್ರಿಗಳು ಅಲ್ಲಿ ತಂಗುವ ಅವಧಿಯನ್ನು ಕಡಿಮೆ ಮಾಡಬಹುದು ಅಥವಾ ಯಾವುದೇ ಯಾತ್ರಿಕರ ತಂಗುವಿಕೆಗೆ ಅನುಮತಿ ನೀಡಿದ್ದರೂ ಕೂಡ ಅವರಿಂದ ದೇಶಕ್ಕೆ ಬೆದರಿಕೆ ಅಥವಾ ಭದ್ರತಾ ದೃಷ್ಟಿಯಿಂದ ಅನಪೇಕ್ಷಿತ ನಡೆಗಳು ಕಂಡುಬಂದರೆ ಅವರ ಪರವಾನಗಿಯನ್ನು ರದ್ದುಗೊಳಿಸಬಹುದು ಎನ್ನಲಾಗಿದೆ.

ಪಾಕ್‌ ಪ್ರವೇಶ ಪರವಾನಗಿಯನ್ನು ಆಧರಿಸಿರುತ್ತದೆ ಮತ್ತು ಪಾಸ್‌ಪೋರ್ಟ್‌ ಕಡ್ಡಾಯವಾಗಿದೆ. ಒಮ್ಮೆ ಆ ಪ್ರದೇಶಕ್ಕೆ ಪ್ರವೇಶಿಸಿದ ನಂತರ ಅಲ್ಲಿನ ಕಾನೂನು ಮತ್ತು ನಿಯಮಗಳಿಗೆ ಬದ್ಧರಾಗಿರಬೇಕು. ಇದರಿಂದ ಯಾತ್ರಿಗಳಿಗೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂಬುದು ಕರಡಿನಲ್ಲಿದೆ.

ಯಾತ್ರಾರ್ಥಿಗಳು ಪಾಕ್‌ನ ಹಲವು ನೀತಿ ನಿಯಮಗಳಿಗೆ ಒಳಪಟ್ಟಿರುತ್ತಾರೆ. ಭಾರತ ಸರ್ಕಾರವೇ ಯಾತ್ರಾರ್ಥಿಗಳ ಸಂಪೂರ್ಣ ಮಾಹಿತಿಯನ್ನು ಮೂರು ದಿನ ಮುಂಚಿತವಾಗಿ ನೀಡಬೇಕು. ಕಾರಿಡಾರ್‌ನಲ್ಲಿ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೂ ಪ್ರವೇಶಕ್ಕೆ ಮುಕ್ತವಾಗಿರುತ್ತದೆ.

ಸಿಖ್​ ಸಮುದಾಯದ ಬಹುದಿನಗಳ ಬೇಡಿಕೆಯಾದ ಕರ್ತಾರ್​ಪುರ್​ ಕಾರಿಡಾರ್​ ಯೋಜನೆಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್ ನ. 28ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ಇದು ಒಮ್ಮೆ ತೆರೆದರೆ ಕರ್ತಾರ್‌ಪುರದಲ್ಲಿರುವ ಸಿಖ್‌ ಯಾತ್ರಿಕರು ಐತಿಹಾಸಿಕ ಗುರುದ್ವಾರ ದರ್ಬಾರ್‌ ಸಾಹಿಬ್‌ಗೆ ನೇರವಾಗಿ ಪ್ರವೇಶ ಪಡೆಯಬಹುದು.

ಕರ್ತಾರ್​ಪುರ್​ ಸಾಹೇಬ್​ ಗುರುದ್ವಾರ ಪಾಕಿಸ್ತಾನದ ರಾವಿ ನದಿ ದಡದಲ್ಲಿದ್ದು, ಗುರುದಾಸ್​ಪುರದಲ್ಲಿರುವ ಡಾರಾ ಬಾಬಾ ನಾನಕ್​ ಗುರುದ್ವಾರದಿಂದ ಕೇವಲ 4 ಕಿ.ಮೀ. ದೂರದಲ್ಲಿದೆ. ಕರ್ತಾರ್​ಪುರದಲ್ಲಿರುವ ಗುರುದ್ವಾರವನ್ನು 1522ರಲ್ಲಿ ಗುರುನಾನಕ್​ ಅವರು ಸ್ಥಾಪಿಸಿದ್ದರು. ಅವರು 1539ರಲ್ಲಿ ಅಲ್ಲಿಯೇ ಸಮಾಧಿ ಹೊಂದಿದ್ದರು ಎಂದು ನಂಬಲಾಗಿದೆ. (ಏಜೆನ್ಸೀಸ್)

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....