ಈ ಫೋಟೋದಲ್ಲಿರೋ ಮೊಸಳೆ ಗುರುತಿಸಿದ್ರೆ ನೀವೇ ಜೀನಿಯಸ್​! ಶೇ.90 ಮಂದಿಯಿಂದ ಸಾಧ್ಯವಾಗಿಲ್ಲ! Optical illusion

Optical illusion

Optical illusion : ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದೃಷ್ಟಿಭ್ರಮ ಎಂದರೇನು?

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

ಮೋಜಿನ ಮಾರ್ಗ

ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ಇದನ್ನೂ ಓದಿ: ವಿಶ್ವದ ಮೊದಲ ಸ್ವಯಂಘೋಷಿತ ಸಲಿಂಗಕಾಮಿ ಇಮಾಮ್ ಮುಹ್ಸಿನ್ ಹೆಂಡ್ರಿಕ್ಸ್ ಗುಂಡಿಕ್ಕೆ ಹತ್ಯೆ! Muhsin Hendricks

ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

optical illusion 1

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ತೆರೆದ ಪ್ರದೇಶವನ್ನು ನೋಡಬಹುದು. ನೆಲದ ಮೇಲೆ ಬೆಡ್​ಶೀಟ್​ ಹಾಸಿ, ಅದರ ಮೇಲೆ ಪೇಪರ್​ ಗ್ಲಾಸ್​, ಫೋರ್ಕ್​, ಹಣ್ಣು-ತರಕಾರಿ ಸಲಾಡ್​ ಸೇರಿದಂತೆ ಅನೇಕ ಆಹಾರ ಪದಾರ್ಥಗಳನ್ನು ಇಡಲಾಗಿದೆ. ಪಿಕ್​ನಿಕ್​ಗೆ ಬಂದಿರುವಂತೆ ಕಾಣುತ್ತದೆ. ಆಹಾರ ಪದಾರ್ಥಗಳನ್ನು ಇಟ್ಟಿರುವ ಸ್ಥಳದಿಂದ ಕೊಂಚ ದೂರದಲ್ಲಿ ಒಂದು ಸಣ್ಣ ಕಾಲುವೆ ಇದ್ದು, ಅದಕ್ಕೆ ಅಡ್ಡಲಾಗಿ ಸೇತುವೆಯೂ ಇದೆ. ಪಕ್ಕದಲ್ಲಿ ಗಿಡಗಂಡಿಗಳು ಬೆಳೆದಿದೆ. ಅಸಲಿ ಸಂಗತಿ ಏನೆಂದರೆ, ಅಲ್ಲೊಂದು ಮೊಸಳೆ ಇದೆ. ಆ ಮೊಸಳೆ ಎಲ್ಲಿದೆ ಎಂಬುವನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಏಕೆಂದರೆ, ಅಷ್ಟು ಸುಲಭವಾಗಿ ಕಣ್ಣಿಗೆ ಕಾಣುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಮೊಸಳೆ ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಮೊಸಳೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಮೊಸಳೆಯನ್ನು ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಮೊಸಳೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

optical illusion 2

1 ತಿಂಗಳಲ್ಲಿ 1000 ಮೊಟ್ಟೆ ತಿಂದ ಯುವಕ! ದೇಹದಲ್ಲಿ ಏನೆಲ್ಲ ಬದಲಾವಣೆ ಆಯ್ತು ಗೊತ್ತಾ? ಇಲ್ಲಿದೆ ಅಚ್ಚರಿ ಸಂಗತಿ… Eggs

ಬೆತ್ತಲೆ ವಿಡಿಯೋ ಕರೆ ಮಾಡಿಸಿ 18 ಲಕ್ಷ ರೂ. ಸಂಪಾದನೆ: ಗಂಡನ ಕರಾಳ ಮುಖ ಬಿಚ್ಚಿಟ್ಟ ಪತ್ನಿ! Crime

ಚಾಂಪಿಯನ್ಸ್​ ಟ್ರೋಫಿ ಬಳಿಕ ಈ ಮೂವರು ಕ್ರಿಕೆಟಿಗರಿಂದ ನಿವೃತ್ತಿ: ಆಕಾಶ್​ ಚೋಪ್ರಾ ಅಚ್ಚರಿ ಹೇಳಿಕೆ! Champions Trophy

Share This Article

ಮಕ್ಕಳು ಪ್ರತಿದಿನ ತಿನ್ನಲೇ ಬೇಕಾದ ಹಣ್ಣುಗಳಿವು..ಕಾರಣ ಹೀಗಿದೆ | Fruits

Fruits: ಮಕ್ಕಳ ಮೆದುಳಿನ ಬೆಳವಣಿಗೆ ಮತ್ತು ನೆನಪಿನ ಶಕ್ತಿ ಹೆಚ್ಚಿಸಲು ಹಣ್ಣುಗಳು ಬಹಳ ಪ್ರಯೋಜನಕಾರಿ. ಹಣ್ಣುಗಳಲ್ಲಿ…

ನೀವು ಕೂಡ ಇದೇ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಈರುಳ್ಳಿ ತಿನ್ನಲೇಬೇಡಿ.. onion

onion : ಈರುಳ್ಳಿಯಿಂದ ಹಲವು ಪ್ರಯೋಜನಗಳಿವೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈರುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.…

ನೀವು ಹೆಚ್ಚಾಗಿ ಹೈ ಹೀಲ್ಸ್ ಧರಿಸುತ್ತೀರಾ? ಹುಷಾರಾಗಿರಿ.. heels

heels : ಮಹಿಳೆಯರು ತಮ್ಮ ಬಟ್ಟೆಗಳಿಗೆ ಹೊಂದಿಕೆಯಾಗುವಂತೆ ಹೈ ಹೀಲ್ಸ್ ಧರಿಸಿ ಸ್ಟೈಲಿಶ್ ಆಗಿ ಕಾಣುವುದು…