More

    ರಾಜ್ಯದಲ್ಲಿ ಹೆಚ್ಚುತ್ತಿರುವ ಕರೊನಾ; ಯಾವ ತರಗತಿಯ ಮಕ್ಕಳಿಗೆ ರಜೆ?

    ಮೈಸೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಕರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳ ಕಾಣುತ್ತಿದ್ದು, ಸಾಂಕ್ರಾಮಿಕ ಪಿಡುಗು ವ್ಯಾಪಿಸುವ ಆತಂಕ ಕಾಡಲಾರಂಭಿಸಿದೆ. ಈ ನಡುವೆ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕು ಕಂಡುಬಂದಿರುವುದು ಆ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.

    ಈ ಕುರಿತು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿನ ಕರೊನಾ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಕರೊನಾ ಪರೀಕ್ಷೆ ಹೆಚ್ಚಿಸುವ ಅಗತ್ಯ ಕಾಣುತ್ತಿಲ್ಲ. ಮಕ್ಕಳಲ್ಲಿ ಇದರ ತೀವ್ರತೆ ತುಂಬಾ ಕಡಿಮೆ ಇದೆ. ಅದಾಗ್ಯೂ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಕಡ್ಡಾಯವಾಗಿ ಹಾಕಿಸಿ ಎಂದಿರುವ ಅವರು ಕರೊನಾ ಪರಿಸ್ಥಿತಿ ನಿಭಾಯಿಸುವ ಬಗ್ಗೆ ಕೇಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ ಎಂದೂ ತಿಳಿಸಿದ್ದಾರೆ. ಆದರೆ ಮಾಸ್ಕ್ ಕಡ್ಡಾಯವಾಗಿ ಧರಿಸಿದರೆ ಒಳ್ಳೆಯದು. ರಾಜ್ಯದಲ್ಲಿ ಮತ್ತೆ ಲಸಿಕೆ ಅಭಿಯಾನ ಆರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

    ಇನ್ನು ಶಾಲಾ ಮಕ್ಕಳಲ್ಲಿ ಸೋಂಕು ಕಂಡುಬಂದಿರುವ ಬಗ್ಗೆ ಪತ್ರಿಕ್ರಿಯಿಸಿರುವ ಅವರು, ಸದ್ಯಕ್ಕೆ ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ. ಆದರೆ ಒಂದು ತರಗತಿಯಲ್ಲಿ 10ರಿಂದ 12 ಮಕ್ಕಳಲ್ಲಿ ಪಾಸಿಟಿವ್ ಕಂಡುಬಂದರೆ ಆಗ ಆ ತರಗತಿಗೆ ಮಾತ್ರ ರಜೆ ನೀಡಲಾಗುವುದು. ಇನ್ನು ಆ ಪ್ರಮಾಣ ಹೆಚ್ಚಾದರೆ ಮಾತ್ರ ಒಂದು ವಾರ ಶಾಲೆಗೆ ರಜೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

    ಭುಗಿಲೆದ್ದಿತು ನಾಮಫಲಕ ವಿವಾದ, ಕರವೇ ಕಾರ್ಯಕರ್ತರಿಂದ ಮಸಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts