More

    ಕೇವಲ ತುರ್ತು ಪ್ರಕರಣಗಳು ವಿಚಾರಣೆಗೆ ಎಂದ ಜಿಲ್ಲಾ ನ್ಯಾಯಾಧೀಶ ಕೃಷ್ಣರಾಜ ಅಸೋಡೆ

    ಬಳ್ಳಾರಿ: ಜಾಮೀನು ಸೇರಿ ತುರ್ತು ಪ್ರಕರಣಗಳನ್ನು ಮಾತ್ರ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುತ್ತಿದೆ. ಬಾಕಿ ಪ್ರಕರಣಗಳಿಗೆ ದಿನಾಂಕ ನಿಗದಿಪಡಿಸಲಾಗುತ್ತಿದೆ. ಕಕ್ಷಿದಾರರು ನ್ಯಾಯಾಲಯಕ್ಕೆ ಗೈರಾದರೆ ಪ್ರಕರಣಕ್ಕೆ ಯಾವುದೇ ಧಕ್ಕೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ನ್ಯಾಯಾಧೀಶ ಕೃಷ್ಣರಾಜ ಅಸೋಡೆ ತಿಳಿಸಿದರು.

    ಕರೊನಾ ತಡೆಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಸೂಚನೆಯಂತೆ ಜಾಗೃತಿ ಮೂಡಿಸಲಾಗುತ್ತಿದೆ. ಮಹಾನಗರ ಪಾಲಿಕೆಯಿಂದ ನಗರದಲ್ಲಿ ಎಲ್ಲ ಕಡೆ ಔಷಧ ಸಿಂಪಡಿಸಬೇಕೆಂದು ಸೂಚಿಸಿದ್ದೇವೆ. ಆರೋಗ್ಯ ಇಲಾಖೆಯವರು ಕಕ್ಷಿದಾರರಿಗೆ ಅಗತ್ಯ ಮಾಹಿತಿ ನೀಡುವುದರ ಜತೆಗೆ ಥರ್ಮಲ್ ಪರೀಕ್ಷೆ, ಮಾಸ್ಕ್, ಸ್ಯಾನಿಟೈಸರ್ ಒದಗಿಸಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಜೈಲಿನಲ್ಲಿರುವ ಕೈದಿಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅದಕ್ಕೆ ಪೂರಕವಾಗಿ ಕಾರಾಗೃಹ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಕೈದಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗುತ್ತಿದೆ ಎಂದು ನ್ಯಾಯಾಧೀಶ ಕೃಷ್ಣರಾಜ ಅಸೋಡೆ ಹೇಳಿದರು.

    ನ್ಯಾಯಾಧೀಶರಾದ ಕಾಸಿಂ ಚೂರಿ ಖಾನ್ ಮಾತನಾಡಿ, ತುರ್ತು ಪ್ರಕರಣಗಳಿಗೆ ಸಂಬಂಧಿಸಿದವರನ್ನು ಹೊರತುಪಡಿಸಿ ಇತರ ವಕೀಲರು ಹಾಗೂ ಕಕ್ಷಿದಾದರರನ್ನು ನ್ಯಾಯಾಲಯದ ಒಳಗೆ ಪ್ರವೇಶ ನಿರಾಕರಿಸಲಾಗಿದೆ. ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರೂ ತಾತ್ಕಾಲಿಕವಾಗಿ ವಾರೆಂಟ್ ಜಾರಿ ಮಾಡುತ್ತಿಲ್ಲ ಎಂದು ಹೇಳಿದರು. ನ್ಯಾಯಾಧೀಶ ಅರ್ಜುನ ಮಲ್ಲೂರು, ವಕೀಲರ ಸಂಘದ ಅಧ್ಯಕ್ಷ ಎಚ್.ಎಂ.ಅಂಕಲಯ್ಯ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts