More

    ದೀಪಾವಳಿಗೆ ಹಸಿರು ಪಟಾಕಿಗಷ್ಟೇ ಅವಕಾಶ; ಮದ್ದು ಸುಡಲಿಕ್ಕೂ ಅವಧಿ ನಿಗದಿ..

    ಬೆಂಗಳೂರು: ರಾಜ್ಯದಲ್ಲಿ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ಬೇರೆ ಪಟಾಕಿ ಮಾರಾಟ ಅಥವಾ ಬಳಕೆ ಕಂಡು ಬಂದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ವಿವಿಧ ಇಲಾಖೆಗಳಿಗೆ ಸೂಚಿಸಿದೆ.

    ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ಮಾಲಿನ್ಯ ಹೆಚ್ಚಾಗದಂತೆ ಪರಿಸರ ಮಾಲಿನ್ಯ ಮಂಡಳಿಯಿಂದ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಈ ವರ್ಷವು ಹಸಿರು ಪಟಾಕಿಯನ್ನಷ್ಟೇ ಇಡುವುದಕ್ಕೆ ಅವಕಾಶ ಕಲ್ಪಿಸಿದ್ದು, ಒಂದು ವೇಳೆ ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಇಡುವುದು ಕಂಡುಬಂದರೆ ಮುಲಾಜಿಲ್ಲದೆ ವಶಪಡಿಸಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ, ಪೋಲಿಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಮತ್ತು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ಅ.24ರಿಂದ 26ರವರೆಗೆ ಆಚರಿಸಲಾಗುತ್ತದೆ.

    ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಟಾಕಿ ಹೊಡೆಯಲು ಅವಕಾಶ. ಪರಿಸರ ಸ್ನೇಹಿ ಪಟಾಕಿಗಳನ್ನು ಹೊಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ರಾಜಾಧಾನಿ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೆಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನು ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ.

    ಮಕ್ಕಳಿಗೆ ಪಟಾಕಿ ಕುರಿತು ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ಮಾಡಲಾಗುವುದು. ಪಟಾಕಿ ಸ್ಟಾಲ್​ಗಳ ಮೇಲೆ ಹದ್ದಿನ ಕಣ್ಣಿಡಲು ಪೋಲಿಸ್ ಇಲಾಖೆಗೂ ಸೂಚನೆ ನೀಡಲಾಗಿದೆ. ಪಟಾಕಿಯಿಂದಾಗುವ ತ್ಯಾಜ್ಯವನ್ನು ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಪಟಾಕಿಗಳಿಂದಾಗುವ ಹಾನಿಯನ್ನು ತಪ್ಪಿಸಲು ಅಗ್ನಿಶಾಮಕ ಇಲಾಖೆಯೊಂದಿಗೂ ಚರ್ಚೆ ಮಾಡಿದ್ದು, ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

    ಕಾಲಿಗೆ ಬಿದ್ದು ಕೇಳ್ತೀನಿ, ಇದೊಂದು ಸಲ ದಯವಿಟ್ಟು ಕ್ಷಮಿಸಿ!; ಅಪ್ಪು ಅಭಿಮಾನಿಗಳ ಅಬ್ಬರಕ್ಕೆ ತತ್ತರಿಸಿದ ಕಿಡಿಗೇಡಿ

    ಕಾಲಮಿತಿ ಯಕ್ಷಗಾನ: ರಾತ್ರಿ ಇಡೀ ಪ್ರದರ್ಶನ ಅನಿವಾರ್ಯವೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts