More

    ಮಹಿಳೆಯರು ಅಡುಗೆ ಮಾಡೋಕೆ ಮಾತ್ರ ಲಾಯಕ್ಕು; ವಿವಾದಾತ್ಮಕ ಹೇಳಿಕೆ ನೀಡಿದ ಶಾಮನೂರು ಶಿವಶಂಕರಪ್ಪ

    ದಾವಣಗೆರೆ: ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಕೀಯ ನಾಯಕರು ಹೆಚ್ಚು ಮತದಾರರನ್ನು ತಮ್ಮತ್ತ ಸೆಳೆಯಲು ಆರೋಪ-ಪ್ರತ್ಯರೋಪಗಳಲ್ಲಿ ತೊಡಗಿದ್ದಾರೆ. ಇನ್ನು ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ಕೊಡುವುದು ಸಹಜವಾಗಿದ್ದು, ಅದಕ್ಕೆ ಪೂರಕವೆಂಬಂತೆ ಹಿರಿಯ ಕಾಂಗ್ರೆಸ್​ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ ಬಿಜೆಪಿ ಅಭ್ಯರ್ಥಿ ಕುರಿತು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ದಾವಣಗೆರೆ ನಗರದ ಭಂಟರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ  ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಕಮಲ ಗೆಲ್ಲಿಸಿ ಮೋದಿಯವರಿಗೆ ಕೋಡೊಣ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಹೇಳುತ್ತಾರೆ. ಮತ್ತೆ ಈ ಹಿಂದೇ ಗೆದ್ದಿದ್ದು ನೀವೇ ಅಲ್ಲವೇ, ಆಗ ಕಮಲದ ಹೂವನ್ನ ಕಳುಹಿಸಿದ್ರಾ ಎಂದು ಪ್ರಶ್ನಿಸಿದ್ದಾರೆ.

    ಕಮಲ ಹೂವನ್ನ ಕಳುಹಿಸಿದರೆ ಅಭಿವೃದ್ದಿ ಆಗಲ್ಲ, ಇಲ್ಲಿ ಅಭಿವೃದ್ದಿ ಕೆಲಸಗಳನ್ನ ಮಾಡಬೇಕು. ಕೇವಲ ಮೋದಿ ಮೋದಿ ಎನ್ನುವುದಲ್ಲ. ಎದುರಾಳಿ ಅಭ್ಯರ್ಥಿಗೆ ಜನರ ನಡುವೆ ಮಾತನಾಡುವುದಕ್ಕೆ ಬರಲ್ಲ. ಅವರು ಮನೆಯಲ್ಲಿ ಅಡುಗೆ ಮಾಡುವುದಕ್ಕೆ ಮಾತ್ರ ಲಾಯಕ್ಕು ಎಂದು ಮಾತನಾಡುವ ಭರದಲ್ಲಿ ಶಾಮನೂರು ಶಿವಶಂಕರಪ್ಪ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

    Prabha Gayathri

    ಇದನ್ನೂ ಓದಿ: ಸೋಲಿನ ನಡುವೆಯೂ ದಿಗ್ಗಜರ ದಾಖಲೆ ಮುರಿದ ವಿರಾಟ್​ ಕೊಹ್ಲಿ

    ಗಾಯತ್ರಿ ಟಾಂಗ್

    ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಕಿಡಿಕಾರಿದ್ದು, ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಮುನ್ನುಗ್ಗುತ್ತಿದ್ದಾರೆ. ಆಕಾಶದಲ್ಲಿ ಹಾರುವ ಹಂತಕ್ಕೂ ಹೋಗಿದ್ದಾರೆ, ಎಲ್ಲಾ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿರುವ ವಿಚಾರ ಅಜ್ಜಗೆ ಗೊತ್ತಿಲ್ಲ ಅಂತಾ ಕಾಣಿಸುತ್ತಿದೆ. ಶಾಮನೂರು ಶಿವಶಂಕರಪ್ಪ ಮಹಿಳೆಯರಿಗೆ ಅಗೌರವ ತೋರಿದ್ದಾರೆ. ಅಡುಗೆ ಮಾಡಿ ಕೈ ತುತ್ತು ಕೊಡೊ ಪ್ರೀತಿ ಅವರಿಗೆ ಗೊತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ನಾವೆಲ್ಲ ಮಹಿಳೆಯರು ಅಡುಗೆ ಮಾಡೋಕೆ ಮಾತ್ರ ಸೀಮಿತವಾ? ಮಹಿಳೆ ಅಡುಗೆನೂ ಮಾಡ್ತಾಳೆ, ಆಕಾಶದಲ್ಲೂ ಹಾರಾಡುತ್ತಾಳೆ. ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಹೊತ್ತು ಕೊಡುತ್ತಿದ್ದಾರೆ. ಆದರೆ ಇಂತಹವರು ಮಹಿಳೆಯರಿಗೆ ಅಪಮಾನ ಮಾಡುತ್ತಾರೆ ಎಂದು ಗಾಯತ್ರಿ ಸಿದ್ದೇಶ್ವರ್‌ ಕಿಡಿಕಾರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts