More

    ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

    ಜೊಯಿಡಾ: ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಸಾಧ್ಯವಾದಷ್ಟು ಪರಿಹರಿಸಲು ಪ್ರಯತ್ನಿಸುತ್ತೇವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

    ತಾಲೂಕಿನ ನಂದಿಗದ್ದಾ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂದಿಗದ್ದಾ ಗ್ರಾಪಂ ವ್ಯಾಪ್ತಿಯ ಜನರಿಂದ 79 ಅರ್ಜಿಗಳು ಸಲ್ಲಿಕೆಯಾದವು. ಅವುಗಳಲ್ಲಿ ಹೆಚ್ಚಿನವು ಮೂಲ ಸೌಕರ್ಯಗಳಿಗೆ ಸಂಬಂಧಿಸಿದ್ದವು. ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ, ಅರಣ್ಯ ಮತ್ತಿತರ ಇಲಾಖೆಗಳೊಂದಿಗೆ ಇನ್ನೊಮ್ಮೆ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

    ಇದೇ ವೇಳೆ ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ಶಿಬಿರ, ಕೋವಿಡ್ ಮಾಹಿತಿ, ಪರೀಕ್ಷೆ, ಲಸಿಕೆ ಕಾರ್ಯಕ್ರಮ ನಡೆಯಿತು. ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಪೋಷಣ ಅಭಿಯಾನ ಜರುಗಿತು. ಅರಣ್ಯ ಇಲಾಖೆಯಿಂದ ಸಸಿ ನೆಡುವುದು, ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು.

    ನಂತರ ಜಿಲ್ಲಾಧಿಕಾರಿ ನ್ಯಾಯಬೆಲೆ ಅಂಗಡಿ, ಸಮಸ್ಯೆ ಇರುವ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

    ಎಸಿ ವಿದ್ಯಾಶ್ರೀ ಚಂದರಗಿ, ತಹಸೀಲ್ದಾರ್ ಸಂಜಯ ಕಾಂಬಳೆ, ಇಒ ಆನಂದ ಬಡಕುಂದ್ರಿ, ಎಸಿಎಫ್ ಕೆ.ಎಸ್. ಗೊರವರ, ನಂದಿಗದ್ದಾ ಗ್ರಾಪಂ ಅಧ್ಯಕ್ಷೆ ಸುಮನಾ ಹರಿಜನ ಇತರರಿದ್ದರು. ಶಿಕ್ಷಕ ಯಶವಂತ ನಾಯ್ಕ, ಭಾಸ್ಕರ ಗಾಂವಕರ ನಿರೂಪಿಸಿದರು.

    ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿ ಸರ್ಕಾರದಿಂದ ಅನುದಾನ ಬಂದಿದ್ದು, ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಇನ್ನಷ್ಟು ಕಾಮಗಾರಿಗಳು ತಲುಪುತ್ತಿಲ್ಲ ಎಂಬುದು ಗ್ರಾಮಸ್ಥರ ದೂರು. ಅರಣ್ಯ ಮತ್ತಿತರ ಇಲಾಖೆಗಳ ಸಮನ್ವಯತೆ ಕೊರತೆ ಬಗ್ಗೆ ಸಭೆ ನಡೆಸಿ ರ್ಚಚಿಸಿ, ಪರಿಹಾರ ಕಂಡುಕೊಳ್ಳಲಾಗುವುದು.

    ಮುಲ್ಲೈ ಮುಗಿಲನ್ ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts