blank

ಲಡ್ಡು ವಿವಾದದ ಬೆನ್ನಲ್ಲೇ Tirupati ಅನ್ನಪ್ರಸಾದದಲ್ಲಿ ಹುಳು ಪತ್ತೆ; ವಿಡಿಯೋ ವೈರಲ್​

Tirupati Prasadam

ತಿರುಪತಿ: ತಿರುಪತಿಗೆ (Tirupati) ಭೇಟಿ ಕೊಡುವ ಭಕ್ತರಿಗೆ ನೀಡಲಾಗುವ ಲಡ್ಡು (Laddu) ಪ್ರಸಾದವನ್ನು ಪ್ರಾಣಿಗಳ ಕೊಬ್ಬನ್ನು (Animal Fat) ಬಳಸಿ ಮಾಡಲಾಗುತ್ತಿದೆ ಎಂಬ ಆರೋಪವೂ ವಿಶ್ವವ್ಯಾಪಿ ಸದ್ದು ಮಾಡಿದ್ದು, ಭಾರತದಲ್ಲಿ ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ. ಲಡ್ಡು ವಿವಾದ ಆರುವ ಮುನ್ನವೇ ಇದೀಗ ಪ್ರಸಾದದಲ್ಲಿ (Prasada) ಹುಳು ಸಿಕ್ಕಿದೆ ಎಂದು ಭಕ್ತರು ಆರೋಪ ಮಾಡಿದ್ದು, ಈ ವಿಡಿಯೋ ಸಖತ್​ ವೈರಲ್​ ಆಗಿದ.

ವೈರಲ್​ ಆಗಿರುವ ವಿಡಿಯೋವನ್ನು ನೋಡುವುದಾದರೆ, ವಾರಂಗಲ್​ನಿಂದ ಬಂದಿರುವ ಭಕ್ತರೊಬ್ಬರು ದೇವರ ದರ್ಶನ ಮುಗಿಸಿ ಆ ಬಳಿಕ ಅನ್ನ ಪ್ರಸಾದವನ್ನು (Anna Prasadam) ಸ್ವೀಕರಿಸಿದ್ಧಾರೆ. ಭಕ್ತರಿಗೆ ಪ್ರಸಾದ ಎಂದು ನೀಡಲಾಗಿದ್ದ ಮೊಸರನ್ನದಲ್ಲಿ (Curd Rice) ಹುಳು ಪತ್ತೆಯಾಗಿದ್ದು, ಈ ವಿಚಾರವನ್ನು ಅಡುಗೆ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಬ್ಬಂದಿ ಕೆಲವೊಮ್ಮೆ ಈಗಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Fire Accident| ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಐವರು ಸಜೀವ ದಹನ

ಸರ್ಕಾರ ಬದಲಾದರೂ ಈ ಸಮಸ್ಯೆಗಳು ಹಾಗೆಯೇ ಉಳಿದಿವೆ ಎಂದು ಹೇಳಿದ್ದಾರೆ. ವಿಷಯ ತಿಳಿದ ನಂತರ ದೇವಾಲಯದ ಸಿಬ್ಬಂದಿ ತಮ್ಮನ್ನು ನಿಂದಿಸಲು ಮತ್ತು ಬೆದರಿಸಲು ಪ್ರಯತ್ನಿಸಿದರು ಎಂದು ಭಕ್ತ ಆರೋಪಿಸಿದ್ದಾರೆ. ಆದರೆ, ಭಕ್ತ ಮಾಡಿರುವ ಆರೋಪವನ್ನು TTD ನಿರಾಕರಿಸಿದ್ದು, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ನಾಯ್ಡು, ದೇವಾಲಯಕ್ಕೆ ಭೇಟಿ ನೀಡುವ ಎಲ್ಲಾ ಭಕ್ತರಿಗೆ ಆಹಾರ ಸುರಕ್ಷತೆ ಮತ್ತು ಉನ್ನತ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಪಾಲಿಸುವಂತೆ ಆದೇಶಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮತ್ತು ಯಾತ್ರಿಕರಿಗೆ ನೀಡುವ ಆಹಾರದ ಪಾವಿತ್ರ್ಯತೆಯನ್ನು ರಕ್ಷಿಸುವಂತೆ ಸೂಚಿಸಿದ್ದಾರೆ.

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…