More

    2ನೇ ಹಂತದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಭಾನುವಾರ ಸಂಜೆ ಅಂತ್ಯ

    ಬೆಂಗಳೂರು: ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರ ಭಾನುವಾರ ಸಂಜೆ 6 ಗಂಟೆಗೆ ತೆರೆ ಬೀಳಲಿದೆ.
    ಮೇ 7 ರಂದು ಈ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚಿತವಾಗಿ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಮತದಾರರಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಕ್ಷೇತ್ರ ಬಿಟ್ಟು ಹೊರ ಹೋಗಬೇಕಿದೆ.
    ಕೊನೆಯ ಎರಡು ದಿನ ರಾಜಕೀಯ ಪಕ್ಷಗಳ ನಾಯಕರು ಈ ಭಾಗದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ.

    2.59 ಕೋಟಿ ಮತದಾರರು

    ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 21 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 227 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಈ ಕ್ಷೇತ್ರಗಳಲ್ಲಿ ಒಟ್ಟು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಇದರಲ್ಲಿ 1,29,48,978 ಪುರುಷ, 1,29,66,570 ಮಹಿಳೆಯರಿದ್ದು, 1935 ಇತರೆ, 35,465 ಸೇವಾ ಮತದಾರರಿದ್ದಾರೆ. ಯುವ ಮತದಾರರು 6,90,929 ಇದ್ದು, 85 ವರ್ಷ ಮೇಲ್ಪಟ್ಟ 2,29,563 ಮತದಾರರಿದ್ದರೆ, 3,43,966 ವಿಕಲಚೇತನ ಮತದಾರರಿದ್ದಾರೆ.
    ಕಲಬುರಗಿ ಕ್ಷೇತ್ರದಲ್ಲಿ ಅತೀ ಹೆಚ್ಚು 20,98,202 ಮತದಾರರಿದ್ದರೆ, ಉತ್ತರ ಕನ್ನಡದಲ್ಲಿ 16,41,156 ಮತದಾರರಿದ್ದಾರೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆಗಳನ್ನು ತೆರೆಯಲಾಗುತ್ತದೆ.

    ಘಟಾನುಘಟಿಗಳು ಕಣದಲ್ಲಿ

    ಈ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಅಣ್ಣಾಸಾಹೇಬ್ ಜೊಲ್ಲೆ, ಪ್ರಿಯಾಂಕಾ ಜಾರಕಿಹೊಳಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ, ಭಗವಂತ ಖೂಬಾ, ಸಾಗರ್ ಖಂಡ್ರೆ, ಶ್ರೀರಾಮುಲು, ಪ್ರಭಾ ಮಲ್ಲಿಕಾರ್ಜುನ, ಗಾಯತ್ರಿ ಸಿದ್ದೇಶ್ವರ್, ಬಿ.ವೈ.ರಾಘವೇಂದ್ರ, ಕೆ.ಎಸ್.ಈಶ್ವರಪ್ಪ, ಗೀತಾ ಶಿವರಾಜ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿ ಪ್ರಮುಖರು ಚುನಾವಣಾ ಕಣದಲ್ಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts