ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ, ಪಿಸ್ತೂಲ್ ತೋರಿಸಿ ಆರೋಪಿ ಬಂಧನ

POLICE SHOW PISTOOL

ವಿಜಯಪುರ: ಪ್ರಕರಣವೊಂದರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ಪೊಲೀಸರು ಸಿನಿಮೀಯ ರೀತಿಯಲ್ಲಿ ಪಿಸ್ತೂಲ್ ತೋರಿಸಿ ಕರೆದೊಯ್ದ ಘಟನೆ ನಡೆದಿದೆ.

ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಸಂಜೆ ಇಂಥದ್ದೊಂದು ಘಟನೆ ನಡೆದಿದ್ದು, ಸಾರ್ವಜನಿಕರು ಕೆಲ ಕಾಲ ಆತಂಕದ ಜೊತೆ ಮನರಂಜನೆ ಕೂಡ ಪಡೆದರು.

ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಆರೋಪಿ ಅವಿನಾಶ ಮಚ್ಚಾಳೆ ಈತನನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ತಾಮ್ರದ ತಂತಿ ಕದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಈತ ವಿಜಯಪುರದಲ್ಲಿ ಕುಟುಂಬಸ್ಥರೊಂದಿಗೆ ವಾಸವಾಗಿರುವ ಮಾಹಿತಿ ಆಧರಿಸಿ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಆಗಮಿಸಿದ್ದರು.

ಅವಿನಾಶನನ್ನು ಕರೆದೊಯ್ಯಬೇಕಾದರೆ ತೀವ್ರ ಹರಸಾಹಸ ಪಡಬೇಕಾಯಿತು. ಮುಫ್ತಿಯಲ್ಲಿದ್ದ ಪೊಲೀಸರು ಬಂಧನಕ್ಕೆ ಮುಂದಾಗುತ್ತಿದ್ದಂತೆ ಆತನ ಕುಟುಂಬದ ಮಹಿಳೆಯರಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಹಾಗೂ ಗಲಾಟೆ ನಡೆಯಿತು. ಆಗ ಪಿಸ್ತೂಲ್ ತೋರಿಸಿ ಕರೆದೊಯ್ಯಬೇಕಾಯಿತು. ಆರೋಪಿಯನ್ನು ಬಂಧಿಸಿ ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಗೆ ಕರೆದೊಯ್ದು ತಮ್ಮ ಹೆಸರು, ವಿಳಾಸ ಹಾಗೂ ಇತರೆ ಮಾಹಿತಿ ನೀಡಿ ಬಳಿಕ ಆರೋಪಿ ಅವಿನಾಶನನ್ನು ಹುಬ್ಬಳ್ಳಿಗೆ ಕರೆದೊಯ್ಯಲಾಯಿತು.

Share This Article

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ