More

    ಆಪರೇಷನ್ ಕಮಲ ಯಾವಾಗಲೂ ಸಕ್ರಿಯ

    ಹುಬ್ಬಳ್ಳಿ: ಅನ್ಯ ಪಕ್ಷಗಳ ಸರ್ಕಾರವನ್ನು ಉರುಳಿಸುವುದೇ ಬಿಜೆಪಿಯ ಕೆಲಸವಾಗಿದೆ. ಇದಕ್ಕಾಗಿ ಕಳೆದ 10 ವರ್ಷಗಳಿಂದ ಬಿಜೆಪಿಯ ಆಪರೇಷನ್ ಕಮಲ ಯಾವಾಗಲೂ ಸಕ್ರಿಯವಾಗಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಟೀಕಿಸಿದರು.

    ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ್ಯಾರಿಗೆ ಬಿಜೆಪಿಯವರು ಆಫರ್ ಕೊಟ್ಟಿದ್ದಾರೆಯೋ ಅವರು ಮುಂದೆ ಬಂದು ಮಾತನಾಡಿದ್ದಾರೆ. ನನ್ನನ್ನು ಯಾರೂ ಸಂರ್ಪಸಿಲ್ಲ. ಮಧ್ಯ ಪ್ರದೇಶ, ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಈ ಹಿಂದೆ ಬಿಜೆಪಿಯವರು ಏನು ಮಾಡಿದ್ದರೂ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.

    ಸಚಿವ ಸತೀಶ ಜಾರಕಿಹೊಳಿ ಅವರು ಹೊರ ದೇಶಕ್ಕೆ ನಮ್ಮ ಪಕ್ಷದ ಶಾಸಕರನ್ನು ಕರೆದೊಯ್ದರೆ ತಪ್ಪೇನಿದೆ ? ಯಾವ್ಯಾವ ಶಾಸಕರು ಹೋಗುತ್ತಿದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಜಾರಕಿಹೊಳಿಯವರು ಕೆಲವು ಶಾಸಕರನ್ನು ಸ್ನೇಹಪರವಾಗಿ ಕರೆದುಕೊಂಡು ಹೋಗುತ್ತಿರಬಹುದು. ಇದರಲ್ಲಿ ರಾಜಕೀಯ ವಿಶ್ಲೇಷಣೆ ಮಾಡುವುದು, ಬಣಗಳನ್ನು ಸೃಷ್ಟಿ ಮಾಡೋದು ಸರಿಯಲ್ಲ ಎಂದು ಹೇಳಿದರು.

    70 ವರ್ಷ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದರು. ನಾವು 70 ವರ್ಷಗಳಲ್ಲಿ ಕಟ್ಟಿದ ದೇವಸ್ಥಾನ, ಮಸೀದಿ ಹಾಗೂ ಚರ್ಚ್​ಗಳಿಗೆ ಇವರಿಂದ ಬಣ್ಣ ಬಳಿಯಲು ಸಾಧ್ಯವಾಗಿಲ್ಲ. ಕೇಂದ್ರದಲ್ಲಿ ಕಳೆದ 10 ವರ್ಷಗಳಲ್ಲಿ ಇವರ ಆಡಳಿತ ನೋಡಿ ಕಾಂಗ್ರೆಸ್ ಸರ್ಕಾರವೇ ಉತ್ತಮ ಎಂಬ ತೀರ್ವನಕ್ಕೆ ಜನ ಬಂದಿದ್ದಾರೆ ಎಂದು ಅಭಿಪ್ರಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts