

ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಸಂಘಟಿತ ದಾಳಿ ನಡೆಸಿದ್ದವು, ಈ ಕಾರ್ಯಾಚರಣೆ ಕೇವಲ 22 ನಿಮಿಷಗಳಲ್ಲಿ ಪೂರ್ಣಗೊಂಡಿತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್ -400, ಆಕಾಶ್ ಕ್ಷಿಪಣಿ ವ್ಯವಸ್ಥೆ, ವಾಯು ರಕ್ಷಣಾ ಬಂದೂಕುಗಳು ಬಹಳ ಉಪಯುಕ್ತವಾಗಿವೆ ಮತ್ತು ಪಾಕಿಸ್ತಾನದ ದಾಳಿಯನ್ನು ಸಂಪೂರ್ಣವಾಗಿ ವಿಫಲಗೊಳಿಸಿವೆ ಎಂದು ಹೇಳಿದರು.
ಮೇ 10 ರಂದು ಭಾರತೀಯ ವಾಯುಪಡೆಯು ಪಾಕಿಸ್ತಾನದ ಅನೇಕ ವಾಯುನೆಲೆಗಳ ಮೇಲೆ ದಾಳಿ ಮಾಡಿದಾಗ, ಇಸ್ಲಾಮಾಬಾದ್ ಸೋಲನ್ನು ಒಪ್ಪಿಕೊಂಡಿತು ಮತ್ತು ಯುದ್ಧವನ್ನು ನಿಲ್ಲಿಸಲು ಮುಂದಾಯಿತು ಎಂದು ಅವರು ಹೇಳಿದರು. ಭವಿಷ್ಯದಲ್ಲಿ ಪಾಕಿಸ್ತಾನದ ಕಡೆಯಿಂದ ಯಾವುದೇ ದಾಳಿ ಸಂಭವಿಸಿದಲ್ಲಿ, ಈ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುವುದು ಎಂದು ಎಂದರು.
ಆಪರೇಷನ್ ಸಿಂಧೂರ್ ನಮ್ಮ ಶಕ್ತಿಯ ಸಂಕೇತವಾಗಿತ್ತು, ಇದರಲ್ಲಿ ನಮ್ಮ ನಾಗರಿಕರನ್ನು ಯಾರಾದರೂ ಕೊಂದರೆ ಭಾರತ ಮೌನವಾಗಿರುವುದಿಲ್ಲ ಎಂದು ನಾವು ತೋರಿಸಿದ್ದೇವೆ ಎಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಮ್ಮ ರಾಜಕೀಯ ವ್ಯವಸ್ಥೆ ಮತ್ತು ನಾಯಕತ್ವ ಯಾವುದೇ ಒತ್ತಡವಿಲ್ಲದೆ ಕೆಲಸ ಮಾಡುತ್ತದೆ. ನಮ್ಮ ಕ್ಷಿಪಣಿಗಳು ಭೌತಿಕ ಗಡಿಗಳನ್ನು ದಾಟುತ್ತವೆ, ಧೈರ್ಯಶಾಲಿ ಸೈನಿಕರು ಶತ್ರುಗಳ ಬೆನ್ನು ಮುರಿಯುತ್ತಾರೆ. ಭಯೋತ್ಪಾದನೆಯ ಪ್ರತಿಯೊಂದು ರೂಪವನ್ನು ಕೊನೆಗೊಳಿಸಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ ಎಂದು ಹೇಳಿದರು.
(ಏಜೇನ್ಸೀಸ್)
ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಕೇವಲ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗಿತ್ತು. ಭಾರತದ ಕ್ಷಿಪಣಿ ದಾಳಿಗಳಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ನಮ್ಮ ಉದ್ದೇಶ ಈಡೇರಿದೆ. ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ರಾಜನಾಥ್ ಸಿಂಗ್ ಹರ್ಷ ವ್ಯಕ್ತಪಡಿಸಿದರು.