ಸಂಘ ಸಂಸ್ಥೆಗಳಿಂದ ಸ್ವಸ್ಥ ಸಮಾಜ ನಿರ್ಮಾಣ : ಶಾಸಕ ಹರೀಶ್ ಪೂಂಜ ಅಭಿಮತ

New Project (8)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಸರ್ಕಾರಿ ಪಶು ವೈದ್ಯಕೀಯ ಚಿಕಿತ್ಸಾಲಯವನ್ನು ಸಂಘ ಸಂಸ್ಥೆಯೊಂದು ಅಭಿವೃದ್ಧಿಪಡಿಸಿರುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮೊದಲ ಉದಾಹರಣೆ. ರೋಟರಿಯಂತ ಸಂಘ ಸಂಸ್ಥೆಗಳು ಜತೆ ಸೇರಿದಾಗ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಬೆಳ್ತಂಗಡಿ ತಾಲೂಕು ಪಶು ಆಸ್ಪತ್ರೆಯ ವಠಾರದಲ್ಲಿ ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟಿಸಿ ಮಾತನಾಡಿದರು.

ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರಿನ ಅಧ್ಯಕ್ಷೆ ಸುಪ್ರಿಯಾ ಖಾಂಡರಿ, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮಂಗಳೂರಿನ ಉಪ ನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಶುಭಹಾರೈಸಿದರು. ಜಿಐ ಆಟೋ ಪ್ರೈವೇಟ್ ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಜಗದೀಶ್ ಮುಗುಳಿ ನಾಮಫಲಕ ಅನಾವರಣಗೊಳಿಸುವ ಮೂಲಕ ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್‌ಗೆ ಚಾಲನೆ ನೀಡಿದರು.

ವಿ.ಪ.ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ಕಾರ್ಯದರ್ಶಿಗಳಾದ ನರಸಿಂಹನ್ ಕಣ್ಣನ್, ಸಂದೇಶ್ ಕುಮಾರ್ ರಾವ್, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ, ಪ್ರಮುಖರಾದ ಡಾ.ಅರುಣ್ ಕುಮಾರ್ ಶೆಟ್ಟಿ, ಡಾ.ಶಿವಣ್ಣ ಮೊದಲಾದವರಿದ್ದರು. ವಕೀಲ ಧನಂಜಯ ರಾವ್ ನಿರೂಪಿಸಿದರು. ತಾಲೂಕು ಪಶು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ರವಿಕುಮಾರ್ ವಂದಿಸಿದರು.

ಸಾಧಕರಿಗೆ ಸನ್ಮಾನ

 ಜಿ.ಐ.ಆಟೋ ಪ್ರೈವೇಟ್ ಲಿಮಿಟೆಡ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಜಗದೀಶ್ ಮುಗುಳಿ, ಕಾರ್ಯದರ್ಶಿ ನರಸಿಂಹನ್ ಕಣ್ಣನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್ ಅವರನ್ನು ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಬೆಳ್ತಂಗಡಿ ತಾಲೂಕಿ ಪಶುಪಾಲನಾ ಆಸ್ಪತ್ರೆ ವತಿಯಿಂದ ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net