ಬಸ್‌ಗಳ ನಡುವೆ ಸಿಲುಕಿ ನಿರ್ವಾಹಕ ಗಂಭೀರ

accident-15
Published on

ಕುಂದಾಪುರ: ಎರಡು ಬಸ್‌ಗಳ ನಡುವೆ ಸಿಲುಕಿ ಹಾಕಿಕೊಂಡಿದ್ದ ಖಾಸಗಿ ಬಸ್ ನಿರ್ವಾಹಕ ಗಂಭೀರವಾಗಿ ಗಾಯಗೊಂಡ ಘಟನೆ ಹೆಮ್ಮಾಡಿ ಜಂಕ್ಷನ್ ಬಸ್ ನಿಲ್ದಾಣದ ಬಳಿ ಮಂಗಳವಾರ ನಡೆದಿದೆ. ಕೊಲ್ಲೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗಲು ಹೆಮ್ಮಾಡಿ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸಲು ನಿಂತುಕೊಂಡಿದ್ದ ಸಂದರ್ಭ ಅದೇ ದಾರಿಯಲ್ಲಿ ಹಿಂದಿನಿಂದ ಬಂದ ಇನ್ನೊಂದು ಖಾಸಗಿ ಬಸ್ಸನ್ನು ಚಾಲಕ ಅಡ್ಡವಾಗಿ ನಿಲ್ಲಿಸಿದ್ದಾರೆ. ಬಸ್ ಕಂಡಕ್ಟರ್ ಶಿವಪ್ರಸಾದ ಎಂಬುವರು ಬಸ್‌ನಿಂದ ಇಳಿದು ಹೆಮ್ಮಾಡಿ ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ಬಸ್ ಚಾಲಕನಲ್ಲಿ ಮಾತನಾಡಲು ಬಂದಾಗ ಎರಡು ಬಸ್ ಚಾಲಕರು ಬಸ್ಸನ್ನು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಮುಂದಕ್ಕೆ ಚಲಾಯಿಸಿದರ ಪರಿಣಾಮ ಕಂಡಕ್ಟರ್ ಶಿವಪ್ರಸಾದ ಎರಡು ಬಸ್ ಮಧ್ಯ ಸಿಕ್ಕಿ ಹಾಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net