25.9 C
Bengaluru
Wednesday, January 22, 2020

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿದ್ದ ಪಾರಂಪರಿಕ ಕಟ್ಟಡ ತೆರವಿಗೆ ಜನಸಾಮಾನ್ಯರ ವಿರೋಧ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಬೆಂಗಳೂರು:  ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ನೂತನ ಕಟ್ಟಡ ನಿರ್ವಣಕ್ಕಾಗಿ 120 ವರ್ಷದಷ್ಟು ಹಳೆಯದಾದ ಪಾರಂಪರಿಕ ಕಟ್ಟಡದ ಅರ್ಧ ಭಾಗವನ್ನು ಕೆಡವಲಾಗಿದ್ದು, ಇತಿಹಾಸ ತಜ್ಞರು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಒಳರೋಗಿಗಳಿಗಾಗಿ ಸಾವಿರ ಹಾಸಿಗೆ ಸಾಮರ್ಥ್ಯದ ಕಟ್ಟಡ ನಿರ್ವಿುಸಲು 68.50 ಕೋಟಿ ರೂ. ವೆಚ್ಚದಲ್ಲಿ 11 ಮಹಡಿಗಳ ಕಟ್ಟಡ ನಿಮಾರ್ಣಕ್ಕೆ ಸಿಎಂ ಯಡಿಯೂರಪ್ಪ ಬುಧವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಶಂಕುಸ್ಥಾಪನೆಗಾಗಿ ಅದರಲ್ಲಿ ಈಗಾಗಲೇ ಅರ್ಧ ಭಾಗವನ್ನು ಕೆಡವಲಾಗಿದ್ದು, ಉಳಿದದ್ದನ್ನು ಕೆಡವಲು ಸಿದ್ಧತೆ ನಡೆದಿದೆ. ಇದಕ್ಕೆ ಸಾರ್ವಜನಿಕರಷ್ಟೇ ಅಲ್ಲ ಆಸ್ಪತ್ರೆಯ ಬಹುತೇಕ ಸಿಬ್ಬಂದಿಯಿಂದಲೂ ಅಸಮಾಧಾನ ವ್ಯಕ್ತವಾಗಿದೆ.

ಇದೀಗ ತೆರವಾಗಿರುವ ಕಟ್ಟಡದಲ್ಲಿ ಎಚ್1ಎನ್1 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮುಂದೆ ತೆರವುಗೊಳಿಸಲು ನಿರ್ಧರಿಸಿರುವ ಭಾಗ ಶಸ್ತ್ರಚಿಕಿತ್ಸಾ ಕೊಠಡಿಯಾಗಿ ಬಳಕೆಯಾಗುತ್ತಿತ್ತು. ಆದರೆ ಸೂಕ್ತ ನಿರ್ವಹಣೆ ಮಾಡದೆ ಕಟ್ಟಡವನ್ನು ಪಾಳುಗೆಡವಲಾಗಿದೆ. ದುರಸ್ತಿ ಮಾಡಿದರೆ ಈಗಲೂ ಬಳಕೆಗೆ ಯೋಗ್ಯವಾಗಿದೆ. ಆದರೆ ಸಾರ್ವಜನಿಕರಿಂದ ಯಾವುದೇ ಅಭಿಪ್ರಾಯ ಪಡೆಯದೇ ಕಟ್ಟಡ ತೆರವಿಗೆ ಮುಂದಾಗಿರುವುದು ವಿರೋಧಕ್ಕೆ ಕಾರಣವಾಗಿದೆ. ಈ ಬಗ್ಗೆ ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿದೆ.

ಸರ್ಕಾರಕ್ಕೆ ಪತ್ರ: ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವ ಬದಲು ಕಾರಣಗಳನ್ನು ನೀಡಿ ತೆರವುಗೊಳಿಸುತ್ತಿರುವುದು ಸರಿಯಲ್ಲ. ನೂತನ ಕಟ್ಟಡ ನಿರ್ವಣಕ್ಕೆ ವಿಕ್ಟೋರಿಯಾ ಆವರಣದಲ್ಲಿ ಬೇರೆ ಜಾಗವನ್ನು ಗುರುತಿಸಬಹುದಿತ್ತು. ಇದಲ್ಲದೆ 5 ವರ್ಷದ ಹಿಂದೆಯೂ ಹೊರ ರೋಗಿಗಳ ವಿಭಾಗ ನಿರ್ವಣಕ್ಕಾಗಿ ಇದೇ ರೀತಿ ಎರಡು ಹಳೆಯ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಈ ಬಗ್ಗೆ ಸರ್ಕಾರ ಪುನರ್ ಪರಿಶೀಲನೆ ನಡೆಸಿ, ಪಾರಂಪರಿಕ ಕಟ್ಟಡವನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಹೆರಿಟೇಜ್ ಬೇಕು ಸಂಘಟನೆ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದೆ.

ಆಸ್ಪತ್ರೆ ಇತಿಹಾಸ

ವಿಕ್ಟೋರಿಯಾ ರಾಣಿಯ 60 ವರ್ಷಗಳ ಆಳ್ವಿಕೆ ಪೂರ್ಣಗೊಂಡ ನೆನಪಿಗಾಗಿ ಮೈಸೂರು ಮಹಾರಾಣಿ ಕೆಂಪ ನಂಜಮ್ಮಣಿ ಅವರು 1897ರಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸಿದರು. 1900ರ ಡಿ. 8ರಂದು ಆಗಿನ ವೈಸ್​ರಾಯ್ ಆಗಿದ್ದ ಲಾರ್ಡ್ ಕರ್ಜನ್ ಆಸ್ಪತ್ರೆಯ ಉದ್ಘಾಟನೆ ಮಾಡಿದ್ದರು. ಗೋಥಿಕ್ ಶೈಲಿಯಲ್ಲಿ ನಿರ್ವಣಗೊಂಡಿರುವ ಈ ಕಟ್ಟಡ 120 ವರ್ಷಗಳ ಇತಿಹಾಸ ಹೊಂದಿದ್ದು, ಪಾರಂಪರಿಕ ಕಟ್ಟಡಗಳ ಪಟ್ಟಿಗೆ ಸೇರಿದೆ.

ಸರ್ಕಾರಿ ನಿಯಮ ಉಲ್ಲಂಘನೆ

ವಿಕ್ಟೋರಿಯಾ ಆಸ್ಪತ್ರೆಯ ಪಾರಂಪರಿಕ ಕಟ್ಟಡವನ್ನು ಒಡೆಯುವ ಮೂಲಕ ಸರ್ಕಾರ ತಾನು ಮಾಡಿದ ನಿಯಮವನ್ನು ತಾನೇ ಉಲ್ಲಂಘಿಸಿದೆ. ಬಿಡಿಎ ರಚಿಸಿರುವ ಪರಿಷ್ಕೃತ ಕರಡು ಮಹಾಯೋಜನೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ಪಾರಂಪರಿಕ ಕಟ್ಟಡಕ್ಕೆ ಸೇರಿದೆ. ಇದಲ್ಲದೆ ಯಾವುದೇ ಪಾರಂಪರಿಕ ಕಟ್ಟಡ ತೆರವಿಗೆ ಮುನ್ನ ಪಾರಂಪರಿಕ ಕಟ್ಟಡಗಳ ಸಮಿತಿಯಿಂದ ಅನುಮತಿ ಪಡೆಯಬೇಕು ಎಂದು ಹೇಳಿದೆ. ಆದರೆ, ಅದಕ್ಕೆ ಅನುಮೋದನೆ ಸಿಗುವ ಮುನ್ನವೇ ಪುರಾತನ ಕಟ್ಟಡದ ಅರ್ಧಭಾಗವನ್ನು ಒಡೆಯಲಾಗಿದೆ. ಇದನ್ನು ವಿರೋಧಿಸಿ ಹೋರಾಟ ನಡೆಸಲು ಸಂಘಟನೆಗಳು ಸಜ್ಜಾಗುತ್ತಿವೆ.

ಕಾರಣವೇ ಪರಿಹಾರವಲ್ಲ

ಭಾರತದಲ್ಲಿ ಪಾರಂಪರಿಕ ಕಟ್ಟಡಗಳ ರಕ್ಷಣೆ ಮಾಡುವುದು ತೀರಾ ಕಡಿಮೆ. ವಿದೇಶಗಳಲ್ಲಿ ಸಾವಿರಾರು ವರ್ಷಗಳ ಕಟ್ಟಡಗಳ ರಕ್ಷಣೆ ಮಾಡಲಾಗಿದೆ. ಅದರೆ ಇಲ್ಲಿ ನೂರು ವರ್ಷಗಳ ಕಟ್ಟಡವನ್ನೂ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂದು ತಂತ್ರಜ್ಞಾನ ಬಹಳಷ್ಟು ಬೆಳವಣಿಗೆ ಹೊಂದಿದೆ. ಅವುಗಳನ್ನು ಸಮಪರ್ಕವಾಗಿ ಬಳಸಿಕೊಂಡು ಪಾರಂಪರಿಕ ಕಟ್ಟಡಗಳನ್ನು ಮುಂದಿನ ಪೀಳಿಗೆಗೂ ಉಳಿಸಬೇಕಿದೆ ಎನ್ನುತ್ತಾರೆ ಇತಿಹಾಸಕಾರ ಸುರೇಶ್ ಮೂನ.

 

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ತೆರವುಗೊಳಿಸಿರುವ ಕಟ್ಟಡವನ್ನು ನಿರ್ವಹಣೆ ಮಾಡಿ ಉಳಿಸಿಕೊಂಡು ಅದನ್ನು ಮ್ಯೂಸಿಯಂ ಆಗಿ ಪರಿವರ್ತಿಸಬಹುದಿತ್ತು. ಆ ಮೂಲಕ ಆಸ್ಪತ್ರೆ ಇತಿಹಾಸ, ಮಹಾನ್ ತಜ್ಞರು ನೀಡಿದ ಸೇವೆ ಹಾಗೂ ಕೊಡುಗೆಗಳು, ಸಂಶೋಧನೆಗಳನ್ನು ಪರಿಚಯಿಸಬಹುದಿತ್ತು.

| ಸುರೇಶ್ ಮೂನ ಇತಿಹಾಸಕಾರ

ಪಾರಂಪರಿಕ ಕಟ್ಟಡವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ, ಪರಿಣತ ವಾಸ್ತುಶಿಲ್ಪಿಗಳಿಂದ ದುರಸ್ತಿ ಮಾಡಿಸಬಹುದು. ಪಾರಂಪರಿಕ ಕಟ್ಟಡಗಳ ಮೇಲೆ ಈ ರೀತಿಯ ದಾಳಿ ನಿರಂತರವಾಗಿ ನಡೆಯುತ್ತಲೇ ಇದ್ದು, ಅವುಗಳ ಸಂರಕ್ಷಣೆಗಾಗಿ ಹೆರಿಟೇಜ್ ಬೇಕು ಸಂಘಟನೆ ಸ್ಥಾಪಿಸಲಾಗಿದೆ.

| ಪ್ರಿಯಾ ಚೆಟ್ಟಿ ರಾಜಗೋಪಾಲ್ ಸಂಸ್ಥಾಪಕಿ, ಹೆರಿಟೇಜ್ ಬೇಕು ಸಂಘಟನೆ 

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...