ಪುಸ್ತಕ ಬಿಡುಗಡೆ ವಿರೋಧಿಸಿ ಕಪ್ಪು ಪಟ್ಟಿ ಪ್ರದರ್ಶನ, ಪ್ರತಿಭಟನೆ ಬಂಧನ


ಕಲಬುರಗಿ : ಆರ್‌ಎಸ್‌ಎಸ್ ಅಂಗ ಸಂಸ್ಥೆಯಾಗಿರುವ ಪ್ರಜ್ಞಾ ಪ್ರವಾಹವು ಅಖಿಲ ಭಾರತ ಸಾಹಿತ್ಯ ಪರಿಷತ್ ಸಹಯೋಗದಡಿ ನಗರದ ಬಸವರಾಜಪ್ಪ ಅಪ್ಪ ಸಭಾಂಗಣದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ `ವಚನ ದರ್ಶನ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮತ್ತು ಸಮಾರಂಭದ ಹೊರಗಡೆ ಮುಖ್ಯರಸ್ತೆಯಲ್ಲಿ ಪುಸ್ತಕ ಬಿಡುಗಡೆ ವಿರೋಧಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ ಘಟನೆ ನಡೆದವು.
ಸಮಾರಂಭದ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆಯಾಗುತ್ತಲೇ ವಿರೋಧಿಸಿ, ಧ್ವನಿ ಸಂಘದ ವಿರುದ್ಧ ಘೋಷಣೆಗಳನ್ನು ಕೂಗಿದವರನ್ನು ಕೂಡಲೇ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡು ಹೊರ ಕರೆದುಕೊಂಡು ಬಂದು ಪೊಲೀಸ್ ವಾಹನದಲ್ಲಿ ಕುಳ್ಳಿರಿಸಿಕೊಂಡು ಹೋದರು.
ವಚನ ದರ್ಶನ ಪುಸ್ತಕ ಬಿಡುಗಡೆ ವಿರೋಧಿಸಿ ಜಾಗತಿಕ ಲಿಂಗಾಯತ ಮಹಾಸಭಾ, ಪ್ರಗತಿಪರರಿಂದ ಸಮಾರಂಭ ನಡೆಯುತ್ತಿದ್ದ ಬಸವರಾಜಪ್ಪ ಅಪ್ಪ ಸಭಾಂಗಣದ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ನಂತರ ಪುಸ್ತಕ ಬಿಡುಗಡೆ ವೇಳೆಯೇ ಸಭಾಂಗಣದಲ್ಲಿ ಕುಳಿತ್ತಿದ್ದ ಕೆಲವರು, ಕಪ್ಪು ಪಟ್ಟಿ ಪ್ರದರ್ಶಿಸಿ ಧಿಕ್ಕಾರ ಕೂಗಿದರು. ಪ್ರತಿರೋಧ ವ್ಯಕ್ತಪಡಿಸಿದವರನ್ನು ಪೊಲೀಸರು ಹೊರಗೆ ಕರೆದ್ಯೊಯ್ದರು. ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಸಮಾರಂಭ ಜರುಗಿತು.

Share This Article

ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…