21.7 C
Bengaluru
Tuesday, January 21, 2020

ಕಾಗವಾಡ /ಐನಾಪುರ: ಅವಕಾಶ ಕೊಡಿ, ನಿಮ್ಮ ಕಣ್ಣೀರು ಒರೆಸುವೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಕಾಗವಾಡ /ಐನಾಪುರ : ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ, ನಾನು ನಿಮ್ಮ ಕಣ್ಣೀರು ಒರೆಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಯ ನೀಡಿದ್ದಾರೆ.

ಕಾಗವಾಡ ತಾಲೂಕಿನ ಐನಾಪುರದಲ್ಲಿ ಸೋಮವಾರ ನಡೆದ ಚುನಾವಣಾ ಬಹಿರಂಗ ಸಮಾವೇಶದಲ್ಲಿ ಅಭ್ಯರ್ಥಿ ಶ್ರೀಮಂತ ಪಾಟೀಲ ಪರ ಮತಯಾಚಿಸಿ ಮಾತನಾಡಿ, ಶ್ರೀಮಂತ ಪಾಟೀಲ ಸೇರಿ 16 ಶಾಸಕರ ತ್ಯಾಗದಿಂದ ನಾನು ಮುಖ್ಯಮಂತ್ರಿಯಾಗಿದ್ದೇನೆ ಎಂದರು.

ಶ್ರೀಮಂತ ಪಾಟೀಲ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಕೊಡುತ್ತೇವೆ ಎಂದು ವಚನ ಕೊಡಿ. ಧಾರಾಕಾರ ಮಳೆಯಲ್ಲೇ ಸಮಾವೇಶದಲ್ಲಿ ಉತ್ಸಾಹದಿಂದ ಭಾಗಿಯಾಗಿರುವುದನ್ನು ನೋಡಿದರೆ ಶ್ರೀಮಂತ ಪಾಟೀಲರ ಮೇಲೆ ನೀವು ಇಟ್ಟಿರುವ ಪ್ರೀತಿಯೇ ಕಾರಣ ಎಂದರು.

ಮಾದರಿ ರಾಜ್ಯ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ನೀರಾವರಿ ಯೋಜನೆ ಪೂರ್ಣಗೊಳಿಸುತ್ತೇನೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಡಿಸುತ್ತೇನೆ. ಅಹಿಂದ ವರ್ಗಗಳ ಕಲ್ಯಾಣಕ್ಕೆ ಶ್ರಮಿಸುತ್ತೇನೆ. ರಾಜ್ಯವನ್ನೇ ಮಾದರಿಯಾಗಿ ಅಭಿವೃದ್ಧಿ ಪಡಿಸುವುದಕ್ಕೆ ಸಂಕಲ್ಪ ತೊಟ್ಟಿದ್ದೇನೆ. ನನಗೊಂದು ಅವಕಾಶ ಕೊಡಿ ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದರು.

ಐನಾಪುರ ಪೇಡೆ: ಉಪಮುಖ್ಯಮಂತ್ರಿ ಲಕ್ಷಣ ಸವದಿ ಮಾತನಾಡಿ, ಶ್ರೀಮಂತ ಪಾಟೀಲ ಅವರನ್ನು ಗೆಲ್ಲಿಸಿ ನೀವು ಪೇಡಾ ಕೊಡುತ್ತಿರೋ? ಜಿಲೆಬಿ ಕೊಡುತ್ತೀರೊ? ಎಂದು ಕೇಳಿದಾಗ, ನೆರೆದಿದ್ದ ಜನರು ಐನಾಪುರ ಪೇಡಾ ಕೊಡುತ್ತೇವೆ ಎಂದು ಕೂಗಿದರು.

ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಮಾತನಾಡಿ, ಇದು ಐತಿಹಾಸಿಕ ಚುನಾವಣೆಯಾಗಬೇಕು. ದಾಖಲೆ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಕೋರಿದರು. ಶಾಸಕ ಉಮೇಶ ಕತ್ತಿ ಮಾತನಾಡಿ, ಮುಂದಿನ ಮೂರುವರೆ ವರ್ಷ ಸುಭದ್ರ ಸರ್ಕಾರವಿದ್ದರೆ ರಾಜ್ಯ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ. ಹಾಗಾಗಿ ಈ ಉಪಚುನಾವಣೆಯಲ್ಲಿ ಶ್ರೀಮಂತ ಪಾಟೀಲ ಅವರನ್ನು ಗೆಲ್ಲಿಸಿ, ಯಡಿಯೂರಪ್ಪ ಕೈ ಬಲಪಡಿಸಬೇಕು ಎಂದರು.

ಸಚಿವರಾದ ಶಶಿಕಲಾ ಜೊಲ್ಲೆ, ಸಿ.ಸಿ. ಪಾಟೀಲ, ಶಾಸಕರಾದ ಪಿ. ರಾಜೀವ್, ಎಂಎಲ್‌ಸಿ ಮಹಾಂತೇಶ ಕವಟಗಿಮಠ, ಮಾಜಿ ಶಾಸಕರಾದ ಸಂಜಯ ಪಾಟೀಲ, ಸೀಮಾ ಮಸೂತಿ, ಬಿಜೆಪಿ ಮುಖಂಡ ಸಂದೀಪ ಯಲಗೂಡಿ ಮತ್ತಿತರರಿದ್ದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...