More

    ಕಡಿಮೆ ವೆಚ್ಚದಲ್ಲಿ ಕಾಶಿ, ಅಯೋಧ್ಯೆ, ಪ್ರಯಾಗರಾಜ್‌ ದರ್ಶನಕ್ಕೆ ಅವಕಾಶ!; ಇಲ್ಲಿದೆ ಓದಿ ಸಂಪೂರ್ಣ ಮಾಹಿತಿ

    ಬೆಂಗಳೂರು: ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ “ಕರ್ನಾಟಕ ಭಾರತ್‌ ಗೌರವ ಕಾಶಿ ದರ್ಶನ” ಯೋಜನೆಯನ್ನು ಐಆರ್​ಸಿಟಿಸಿ (IRCTC) ಮತ್ತು ಭಾರತೀಯ ರೈಲ್ವೆ ಇಲಾಖೆಯ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ ಕೈಗೊಳ್ಳಲಾಗಿದೆ.

    ಇದನ್ನೂ ಓದಿ: ಬಿಜೆಪಿಯಿಂದ ಕಾರ್ಯಕರ್ತರಿಗೆ 10 ಸಾವಿರ ಹೆಲ್ಮೇಟ್ ವಿತರಣೆ

    ಈ ಯೋಜನೆಯಡಿ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ತಲಾ 20,000 ರೂ. ಪ್ಯಾಕೇಜ್‌ ರೂಪಿಸಿದ್ದು, ಈ ಮೊತ್ತದಲ್ಲಿ ತಲಾ 5,000 ರೂ.ಗಳನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಿ, ಉಳಿದ ಮೊತ್ತ 15,000 ರೂ.ಗಳನ್ನು ಯಾತ್ರಾರ್ಥಿಗಳು ಪಾವತಿಸಬೇಕಾಗಿರುತ್ತದೆ. ಈ ವಿಶೇಷ ರೈಲಿನಲ್ಲಿ ತೆರಳುವ ಯಾತ್ರಾರ್ಥಿಗಳಿಗೆ ಉಪಾಹಾರ, ಊಟ, ತಂಗುವಿಕೆ, ಸ್ಥಳೀಯ ಸಾರಿಗೆ ಮತ್ತು ಸ್ಥಳೀಯ ವೀಕ್ಷಣೆ ಒಳಗೊಂಡಿದ್ದು, ಇದು ಒಟ್ಟು 7 ದಿನಗಳ ಪ್ರವಾಸವಾಗಿರುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಈ ಯೋಜನೆಯಡಿ ಈವರೆಗೆ ಒಟ್ಟು 3 ಟ್ರಿಪ್‌ಗಳನ್ನು ಪೂರೈಸಿದ್ದು, ಈ ವಿಶೇಷ ರೈಲಿನಲ್ಲಿ ಒಟ್ಟು 1644 ಯಾತ್ರಾರ್ಥಿಗಳು ಯಾತ್ರೆ ಪೂರೈಸಿದ್ದಾರೆ. ಯಾತ್ರಾರ್ಥಿಗಳಿಗೆ ಪ್ರಯಾಣದ ಒಟ್ಟು ಪ್ಯಾಕೇಜ್‌ ದರ 20,000 ರೂ.ಗಳ ಪೈಕಿ ಸರ್ಕಾರದಿಂದ ತಲಾ 5,000 ರೂ.ಗಳಂತೆ 82.20 ಲಕ್ಷ ರೂ. ಸಹಾಯಧನವನ್ನು ವಿತರಿಸಲಾಗಿದೆ.

    ಇದನ್ನೂ ಓದಿ: ಭಾರತ ಗ್ರಾಮೀಣ ಪ್ರದೇಶಗಳಿಗೆ ಹೆಸರುವಾಸಿಯಾಗಿಲ್ಲ; ನಟಿ ಉರ್ಫಿ ಜಾವೇದ್​​ ಹೇಳಿಕೆಗೆ ವ್ಯಾಪಕ ಟೀಕೆ!

    ಈಗ ನಾಲ್ಕನೇ ಪ್ರವಾಸದ ವಿಶೇಷ ರೈಲು 29.07.2023 ರಂದು ಬೆಂಗಳೂರಿನಿಂದ ಹೊರಡಲಿದ್ದು, ಯಾತ್ರೆಗೆ ತೆರಳುವ ಯಾತ್ರಾರ್ಥಿಗಳು ಈ ಕೆಳಕಂಡ ಲಿಂಕ್‌ ಮೂಲಕ ಅಥವಾ ಐಆರ್​ಸಿಟಿಸಿ ಪೋರ್ಟಲ್‌ ಮೂಲಕ ತಮ್ಮ ಟಿಕೆಟ್‌ ಕಾಯ್ದಿರಿಸಿಕೊಳ್ಳಬಹುದಾಗಿದೆ. ಈಗ ಹೊಸದಾಗಿ ಸುಸಜ್ಜಿತ LHB ಕೋಚ್‌ಗಳನ್ನು ಅಳವಡಿಸಲಾಗಿದ್ದು, ಇದು ಸ್ವಚ್ಛ ಸ್ಥಳದಲ್ಲಿ ಅಡುಗೆ ತಯಾರು ಮಾಡುವ ಅಡುಗೆ ಮನೆಯನ್ನು (PANTRY CAR) ಒಳಗೊಂಡಿರುತ್ತದೆ. ಯಾತ್ರಾರ್ಥಿಗಳ ಹಿತ ದೃಷ್ಟಿಯಿಂದ ಇಬ್ಬರು ವೈದ್ಯರು ಸಹ ಪ್ರಯಾಣಿಸುತ್ತಾರೆ ಎಂದು ತಿಳಿಸಿದ್ದಾರೆ.

    ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಈ ಲಿಂಕ್​ ಕ್ಲಿಕ್ ಮಾಡಿ https://www.irctctourism.com

    ಸಿದ್ದರಾಮಯ್ಯ ಸದನದ ಬಾಗಿಲು ಒದ್ದಿದ್ದರು, ಡಿಕೆಶಿ ಸದನದಲ್ಲೇ ಪೇಪರ್ ಹರಿದುಹಾಕಿದ್ದರು: ಇತಿಹಾಸ ನೆನಪಿಸಿದ ಬೊಮ್ಮಾಯಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts